23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗೇರುಕಟ್ಟೆ ದಿವಾಕರ ಆಚಾರ್ಯರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಕಳೆದ ಮೂರು ವರ್ಷಗಳಿಂದ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಪ್ರತಿಷ್ಠಾನ ಇದರ ಸ್ವರ್ಣ ಮಹೋತ್ಸವದ ಪ್ರಯುಕ್ತ ಜಿಲ್ಲೆಯಾದ್ಯಂತ ಶ್ರೀ ಮಹಾಭಾರತ ಸರಣಿಯ 130 ತಾಳಮದ್ದಳೆ , ಜಿಲ್ಲೆಯ 18 ಆಹ್ವಾನಿತ ತಂಡಗಳ ತಾಳಮದ್ದಳೆ , ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿ ಪ್ರತಿಷ್ಠಾನಕ್ಕೆ ಮೆರುಗನ್ನು ನೀಡಿದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಭಾರತಿ ಎಂ. ಎಲ್ ಇವರನ್ನು ಸ್ವರ್ಣ ಮಹೋತ್ಸವ ಸಮಾರಂಭದಲ್ಲಿ ಗೌರವಿಸಲಾಯಿತು.

ಡಾ. ಯಂ.ಪ್ರಭಾಕರ ಜೋಶಿ, ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಡಿ. ಚಂದಪ್ಪ ಮೂಲ್ಯ, ಪುತ್ತೂರಿನ ನಿಕಟಪೂರ್ವ ಶಾಸಕ ಸಂಜೀವ ಮಟoದೂರು, ಮಂಗಳೂರು ವಿಶ್ವಕರ್ಮ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಹರೀಶ್ ಆಚಾರ್, ಬೊಳುವಾರು ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಮತ್ತು ಪ್ರತಿಷ್ಠಾನದ ಪದಾಧಿಕಾರಿಗಳು, ಸ್ವರ್ಣ ಮಹೋತ್ಸವ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಿದರು.

Related posts

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಲ್ಮಂಜ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವಿರುದ್ಧ ಆಧಾರ ರಹಿತ ಅಪಪ್ರಚಾರ ಆರೋಪ ಮುಖ್ಯ ಕಾರ್ಯನಿರ್ವಾಹಕರಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!