ಕಳೆoಜ: ಇತ್ತೀಚೆಗೆ ಮೃತರಾದ ಕಳೆoಜ ಗ್ರಾಮದ ಕಾಯರ್ತಡ್ಕ ಅಂಗರಂಡ ನಿವಾಸಿ ಗ್ರಾಮದ ಗುತ್ತು ಗೌಡರಾದ ದಿ.ಐತಪ್ಪ ಗೌಡರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ಯೋಗೀಶ್ ಗೌಡ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು.
ಸ್ಥಳದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಮನ್ ಕೀ ಬಾತ್ ಸಂಚಾಲಕರಾದ ಸೀತಾರಾಮ್ ಬಿ. ಎಸ್ ಬೆಳಾಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ, ಮಂಡಲ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ರಾಜೇಶ್ ಎಂ ಕೆ, ಮಂಡಲ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಖ್ಯಾರ್, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು, ಪುದುವೆಟ್ಟು, ಮಿಲ್ಕ್ ಸೊಸೈಟಿ ಅಧ್ಯಕ್ಷರಾದ ವಿಜಯ ಕುಮಾರ್ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.












