23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಉಜಿರೆ : ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ 2026-27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.

ಪಂದ್ಯಾವಳಿಯನ್ನು ಮುಖ್ಯ ಅತಿಥಿಗಳಾಗಿ ಉಜಿರೆಯ ಸೋನಿಯಾ ಯಶೋವರ್ಮ ಉದ್ಘಾಟಿಸಿ ಮಾತನಾಡಿ,
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ಮಾನಸಿಕ ದೃಢತೆ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುವ ಜೊತೆಗೆ ಸೋಲನ್ನು ಸ್ವೀಕರಿಸುವುದು, ಗೆಲುವನ್ನು ಸಂಭ್ರಮಿಸುವುದು, ಒತ್ತಡದ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುವುದು ಹಾಗೂ ಸೋಲಿನ ನಂತರ ಮತ್ತೆ ಆತ್ಮವಿಶ್ವಾಸದಿಂದ ಮುನ್ನಡೆಯುವುದು ಸೇರಿದಂತೆ ಕ್ರೀಡೆ ಜೀವನದ ಹಲವು ಮೌಲ್ಯಗಳನ್ನು ಕಲಿಸುತ್ತದೆ. ಕಬಡ್ಡಿ ಕೇವಲ ಆಟವಲ್ಲದೆ ಧೈರ್ಯ, ವೇಗ, ಶಕ್ತಿ, ತಂತ್ರಗಾರಿಕೆ ಮತ್ತು ತಂಡದ ಮನೋಭಾವವನ್ನು ಬೆಳೆಸುವ ಕ್ರೀಡೆಯಾಗಿದೆ.

ಕಬಡ್ಡಿಯಲ್ಲಿ ಯಶಸ್ಸು ಒಬ್ಬ ಆಟಗಾರನಿಂದ ಮಾತ್ರ ಸಾಧ್ಯವಿಲ್ಲ; ತಂಡದ ಪ್ರತಿಯೊಬ್ಬ ಆಟಗಾರನ ಸಹಕಾರ ಮತ್ತು ಸಮನ್ವಯ ಅತ್ಯಗತ್ಯವಾಗಿದೆ. ಒಬ್ಬ ಆಟಗಾರ ದಾಳಿ ನಡೆಸಿದರೆ, ಇತರರು ರಕ್ಷಣೆಯ ಮೂಲಕ ಬೆಂಬಲ ನೀಡುತ್ತಾರೆ. ಇದೇ ರೀತಿಯಲ್ಲಿ ಜೀವನದಲ್ಲಿಯೂ ಪೋಷಕರು, ಶಿಕ್ಷಕರು, ಸ್ನೇಹಿತರು, ಮಾರ್ಗದರ್ಶಕರು ಹಾಗೂ ಸಂಸ್ಥೆಯ ಸಹಕಾರದಿಂದ ಯಶಸ್ಸು ಸಾಧ್ಯವಾಗುತ್ತದೆ. ಆದ್ದರಿಂದ ಯಾವುದೇ ಸಾಧನೆಯ ಹಿಂದೆ ಒಗ್ಗಟ್ಟು ಮತ್ತು ಸಾಮೂಹಿಕ ಪ್ರಯತ್ನ ಪ್ರಮುಖವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಯಶಸ್ಸನ್ನು ಸಾಧಿಸಲು ನಿರಂತರ ಅಭ್ಯಾಸ, ಶಿಸ್ತು, ಸೂಕ್ತ ಆಹಾರ, ವಿಶ್ರಾಂತಿ ಹಾಗೂ ಕಠಿಣ ಪರಿಶ್ರಮ ಅಗತ್ಯ. ಆರಂಭದಲ್ಲಿ ಫಲಿತಾಂಶ ದೊರೆಯದಿದ್ದರೂ ನಿರಂತರವಾಗಿ ಪ್ರಯತ್ನಿಸುವ ಮನೋಭಾವವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು. ಭಾರತೀಯ ಸಾಂಪ್ರದಾಯಿಕ ಕ್ರೀಡೆಯಾದ ಕಬಡ್ಡಿ ಇಂದು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಯುವ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತಿದೆ ಎಂದು ಶುಭ ಹಾರೈಸಿದರು.

ಮಂಗಳೂರು ವಿಶ್ವವಿದ್ಯಾಲಯ, ಕೊಣಾಜೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಮಾತನಾಡಿ, ಕ್ರೀಡಾಪಟುಗಳು ಪಂದ್ಯ ನಡೆಯುವ ಸಮಯದಲ್ಲಿ ಮಾತ್ರ ಕ್ರೀಡೆಯಲ್ಲಿ ತೊಡಗಿಸಿಕೊಳ್ಳದೆ, ಪ್ರತಿದಿನತ್ಯದ ಅಭ್ಯಾಸವಾಗಿ ರೂಪಿಸಿಕೊಳ್ಳಬೇಕು.

ಇಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಲವು ಅವಕಾಶಗಳು ಲಭ್ಯವಿವೆ. ವಿಶ್ವವಿದ್ಯಾಲಯ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ಮತ್ತು ವೇದಿಕೆಗಳು ದೊರೆಯುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಮಂಗಳೂರು ವಿಶ್ವವಿದ್ಯಾಲಯವು ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತ ಮಟ್ಟಕ್ಕೆ ಬೆಳೆಯುವ ವಿಶ್ವಾಸವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಮಾತನಾಡಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಾಗುತ್ತಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಶಿಸ್ತು, ಸಂಸ್ಕಾರ, ಮೌಲ್ಯಯುತ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕ್ರೀಡೆಗೂ ವಿಶೇಷ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುತ್ತಿದೆ. ಈಗಾಗಲೇ ಹಲವು ಜನ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಸಂಸ್ಥೆ ಮುಂದೆಯೂ ಮತ್ತಷ್ಟು ಸವಲತ್ತು ಹಾಗು ಸಹಕಾರವನ್ನು ಕಲ್ಪಿಸಿಕೊಡಲಾಗುವುದು ಎಂದರು.

ವೆರಿ ರೆವರೆಂಡ್ ಮೊನ್ಸಿಗ್ನೋರ್ ಆಂಥೋನಿ ಪಟ್ರಾವ್ ಸ್ಮಾರಕ ಟ್ರೋಫಿಗಾಗಿ ನಡೆಯಲಿರುವ ಈ ಪ್ರತಿಷ್ಠಿತ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಸುಳ್ಯ, ಮಂಗಳೂರು, ವಾಮದಪದವು, ಕುಂದಾಪುರ, ಬಲ್ಮಠ, ಕಲ್ಲಡ್ಕ, ಉಡುಪಿ, ಹಳೆಯಂಗಡಿ, ಸವಣೂರು, ಮುಡಿಪು, ಪುತ್ತೂರು, ಕಾರ್‌ಸ್ಟ್ರೀಟ್, ಬೆಳ್ಳಾರೆ, ಉಪ್ಪಿನಂಗಡಿ, ಬೆಳ್ತಂಗಡಿ, ಪುಂಜಾಲಕಟ್ಟೆ, ಸಿದ್ಧಕಟ್ಟೆ, ಮೂಡಬಿದ್ರಿ ಹಾಗೂ ಹಂಪನಕಟ್ಟೆ ಸೇರಿದಂತೆ ವಿವಿಧ ಕಾಲೇಜುಗಳ ಸುಮಾರು 25 ಕ್ಕೂ ಅಧಿಕ ಮಹಿಳಾ ತಂಡಗಳು ಈಗಾಗಲೇ ನೋಂದಾಯಿಸಿದ್ದು, ಅಂತರ್ ಕಾಲೇಜುಗಳ ಪಂದ್ಯಾವಳಿಯಲ್ಲಿ ಸೆಣಸಾಡಲಿವೆ.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಕೆ ಪಿ ನಂದಕುಮಾರಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ಪಂದ್ಯಾಟದ ಸಂಯೋಜಕಿ ಹಾಗು ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.‌ ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಸಾಹಯಕ ಪ್ರಾಧ್ಯಾಪಕ ದೀಕ್ಷಿತ್ ರೈ ನಿರೂಪಿಸಿ, ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಕೃಷ್ಣಾನಂದ ರಾವ್, ಸುದೀನ್ ಪೂಜಾರಿ, ಸಂದೇಶ್ ಪೂಂಜಾ ಮತ್ತು ಜಶ್ವಂತ್ ಗೌಡ ಸಹಕರಿಸಿದರು.

Related posts

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya
error: Content is protected !!