28 C
ಪುತ್ತೂರು, ಬೆಳ್ತಂಗಡಿ
September 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ‌  ‘ಸಾಧಕ ರತ್ನ ‘ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್  ಸೂಟರ್‌ಪೇಟೆ  ಅವರಿಗೆ ‘ಸಾಧಕ ರತ್ನ’  ಪ್ರಶಸ್ತಿಯನ್ನು ಕೇರಳ ಸರಕಾರದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ವಿ.ಇ.ಅಬ್ದುಲ್ ಗಫೂರು ಅವರು ಭಾನುವಾರ ಪ್ರದಾನ ಮಾಡಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಕೇರಳದ ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕೇರಳ–ಕರ್ನಾಟಕ ಜಾನಪದ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಆರು ಮಂದಿ ಪ್ರಮುಖ ಸಾಧಕರಿಗೆ ‘ಸಾಧಕ ರತ್ನ’ ಪ್ರಶಸ್ತಿ ನೀಡಲಾಗಿದೆ. ಎಸ್.ಜಗದೀಶ್ಚಂದ್ರ ಅಂಚನ್ ಕ್ರೀಡಾ ಬರವಣಿಗೆಯ ಮೂಲಕ ಪತ್ರಿಕೋದ್ಯಮದಲ್ಲಿ ಹಲವು ವರ್ಷಗಳಲ್ಲಿ ವಿವಿಧ ಪತ್ರಿಕೆಗಳಲ್ಲಿ ಬರೆದ 4500ಕ್ಕೂ ಹೆಚ್ಚು ಲೇಖನಗಳ ಗಣನೀಯ ಸೇವೆಯನ್ನು ಗುರುತಿಸಿ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಎರ್ನಾಕುಳಂ ಶಾಸಕ ಟಿ.ಜೆ.ವಿನೋದ್, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಇದರ ಅಧ್ಯಕ್ಷರಾದ ಫ್ರೊ.ಹಿ.ಚಿ. ಬೋರಲಿಂಗಯ್ಯ, ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಆಯೋಗದ ಸದಸ್ಯ ಟಿ.ಎಂ.ಶಾಹೀದ್, ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ‌ ಸಮಿತಿ ಸದಸ್ಯ ರಾಧಾಕೃಷ್ಣ ಕೆ.ಉಳಿಯತ್ತಡ್ಕ,  ಕಜಾಪ ಕೇರಳ ಘಟಕಾಧ್ಯಕ್ಷ ಡಾ.ಮಲ್ಲಿಕಾರ್ಜುನ ಎಸ್.ನಾಸಿ, ಪ್ರಮುಖರಾದ ಅಬ್ದುಲ್ ರೆಹಮಾನ್, ರವಿ ನಾಯ್ಕಾಪು, ಶಿವರೆಡ್ಡಿ ಖ್ಯಾಡೇದ್, ಪದ್ಮಶ್ರೀ ಪುರಸ್ಕೃತರಾದ ಸತ್ಯನಾರಾಯಣ ಬೆಳೇರಿ, ಲಕ್ಷ್ಮೀ ಮಹೇಶ್ ರಾಜು ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya
error: Content is protected !!