31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲಿಸಲು ಸಮಿತಿ ರಚನೆ: ಬೆಳ್ತಂಗಡಿ ವಕೀಲರ ಸಂಘ ಸ್ವಾಗತ

ಬೆಳ್ತಂಗಡಿ : ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚಿಸಿರುವುದನ್ನು ಬೆಳ್ತಂಗಡಿ ವಕೀಲರ ಸಂಘ ಸ್ವಾಗತಿಸಿದೆ.

ಕರ್ನಾಟಕ ಹೈಕೋರ್ಟ್‌ನ ಸೆ.29ರ ಅಧಿಸೂಚನೆಯಂತೆ, ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಪ್ರದೇಶ, ಮೈಸೂರು, ಕೊಡಗು-ಮಡಿಕೇರಿ, ಹಾಸನ, ದಾವಣಗೆರೆ ಹಾಗೂ ಉತ್ತರ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ.

ಹೈಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದ್ದು, ಸಂಬಂಧಪಟ್ಟ ಎಲ್ಲ ಪಾಲುದಾರರ ಅಭಿಪ್ರಾಯಗಳನ್ನು ಪಡೆದು ಈ ಕುರಿತು ವರದಿ ಸಲ್ಲಿಸುವ ಜವಾಬ್ದಾರಿ ನೀಡಲಾಗಿದೆ.

ಕರಾವಳಿ ಭಾಗದ ಜನರು ನ್ಯಾಯಾಂಗ ಸೇವೆಗಾಗಿ ದೂರದ ಬೆಂಗಳೂರು ಸೇರಿದಂತೆ ಇತರ ಪ್ರದೇಶಗಳಿಗೆ ತೆರಳಬೇಕಾಗುವ ಪರಿಸ್ಥಿತಿ ಇದೆ. ಮಂಗಳೂರಿನಲ್ಲಿ ಹೈಕೋರ್ಟ್‌ನ ಪೀಠ ಸ್ಥಾಪನೆಯಾದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜನರಿಗೆ ನ್ಯಾಯಾಂಗ ಸೇವೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವ ಸಾಧ್ಯತೆ ಇದೆ. ವಕೀಲರು ಹಾಗೂ ಕಕ್ಷಿದಾರರಿಗೂ ಸಮಯ ಮತ್ತು ಪ್ರಯಾಣದ ಹೊರೆ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ಇದೆ.

ಹೈಕೋರ್ಟ್‌ನ ಈ ಅಧಿಸೂಚನೆಯನ್ನು ಸ್ವಾಗತಿಸಿರುವ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಸಾಧ್ಯತೆಯನ್ನು ಪರಿಶೀಲಿಸಲು ಅಧಿಕೃತವಾಗಿ ಸಮಿತಿ ರಚಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಸಮಿತಿಯು ಸಂಬಂಧಪಟ್ಟ ವಕೀಲರ ಸಂಘಗಳು, ನ್ಯಾಯಾಂಗ ಕ್ಷೇತ್ರದ ಪ್ರತಿನಿಧಿಗಳು ಹಾಗೂ ಇತರ ಪಾಲುದಾರರ ಅಭಿಪ್ರಾಯಗಳನ್ನು ಪರಿಗಣಿಸಿ ವಾಸ್ತವಾಂಶಗಳ ಆಧಾರದಲ್ಲಿ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ನ್ಯಾಯಾಂಗ ವ್ಯವಸ್ಥೆಯ ಅಗತ್ಯತೆಗಳು, ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಕುರಿತು ಸಮಿತಿಗೆ ಸಮಗ್ರ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಕೀಲರ ಸಂಘವೂ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠದ ಬೇಡಿಕೆ ಹಲವು ವರ್ಷಗಳಿಂದ ಚರ್ಚೆಯಲ್ಲಿದ್ದು, ಬೆಳ್ತಂಗಡಿ ಯಲ್ಲಿ ವಿವಿಧ ಸಂಘ ಸಂಸ್ಥೆ ಗಳನ್ನು, ಶಿಕ್ಷಣ ಸಂಸ್ಥೆಯ ಮುಖ್ಯಸ್ತರನ್ನು ಒಟ್ಟುಗೂಡಿಸಿ ವಕೀಲರ ಭವನದಲ್ಲಿ ಈ ಬಗ್ಗೆ ಹಿಂದಿನ ಸಮಿತಿಯವರು ಜನರಲ್ಲಿ ಜಾಗ್ರತಿಯನ್ನು ಮೂಡಿಸಿದ್ದರು. ಇದೀಗ ಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆಯಾಗಿರುವುದು ಈ ವಿಚಾರಕ್ಕೆ ಹೊಸ ಮಹತ್ವ ದೊರೆತಂತಾಗಿದೆ.

Related posts

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya
error: Content is protected !!