31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಎಂಆರ್ ಪಿ ಎಲ್ ಘಟಕದಲ್ಲಿ ಸ್ಫೋಟ: ಸಾರ್ವಜನಿಕರು ಸಹಕರಿಸುವಂತೆ ಬ್ರಿಜೇಶ್ ಚೌಟ ಮನವಿ

ಮಂಗಳೂರು : ಎಂಆರ್‌ಪಿಎಲ್ (MRPL) ಘಟಕದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಸಂಬಂಧಪಟ್ಟವರಿಂದ
ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಘಟನೆ ಸಂಬಂಧಿಸಿದಂತೆ ಎಂ.ಆರ್.ಪಿಎಲ್ ಅಧಿಕಾರಿಗಳು, ಪೊಲೀಸ್ ಆಯುಕ್ತರು, ಬಜ್ಪೆ ಪಟ್ಟಣ ಪಂಚಾಯತ್ ಹಾಗೂ ಅಗ್ನಿಶಾಮಕದಳದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಸ್ಫೋಟದ ನಂತರದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗಿದ್ದು, ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವ ಹಾಗೂ ಸುರಕ್ಷತೆ ಕಾರ್ಯಾಚರಣೆ ಭರದಿಂದ ಸಾಗಿಸಲು ಸೂಚಿಸಲಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ರವರು ತಿಳಿಸಿದ್ದಾರೆ.

ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಅಗತ್ಯ ಸಿದ್ಧತೆಗಳೊಂದಿಗೆ ಸನ್ನದ್ಧವಾಗಿರಲು ಸೂಚನೆ ನೀಡಲಾಗಿದೆ. ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ವಿನಂತಿಸುತ್ತೇನೆ.


ಇಂದು ಬೆಳ್ತಂಗಡಿಯಲ್ಲಿ ಪೂರ್ವನಿಗದಿಯಾಗಿದ್ದ ನನ್ನ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲು ಘಟನಾ ಸ್ಥಳಕ್ಕೆ ತೆರಳುತ್ತಿದ್ದೇನೆ.

ಪ್ರತಿಯೊಬ್ಬರೂ ಶಾಂತಿಯುತವಾಗಿರಲು, ಯಾವುದೇ ರೀತಿಯ ವದಂತಿಗಳು ಅಥವಾ ತಪ್ಪು ಮಾಹಿತಿಗಳನ್ನು ಹರಡದಂತೆ ಮತ್ತು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಾರ್ವಜನಿಕರು ಸಹಕರಿಸುವಂತೆ ವಿನಂತಿಸುತ್ತೇನೆ.

Related posts

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya

ಶಿಕ್ಷಕರ ಸೇವೆ ಗುರುತಿಸಿ ಗೌರವಿಸಿದ ಬೆಳ್ತಂಗಡಿ ರೋಟರಿ ಕ್ಲಬ್

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
error: Content is protected !!