31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸಿಎ ಬ್ಯಾಂಕಿನ ಸುವರ್ಣ ಸಂಭ್ರಮ- ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ 2026ರ ಅಂಗವಾಗಿ ಆಯೋಜಿಸಲಾಗಿರುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ಶಶಿಧರ್ ಡೋಂಗ್ರೆ ಅವರು ಸೆ 30ರಂದು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶಶಿಧರ್ ಡೋಂಗ್ರೆ ಅವರು, ಸಹಕಾರ ಕ್ಷೇತ್ರದ ಸುವರ್ಣ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕೆಸರುಗದ್ದೆ ಕ್ರೀಡಾಕೂಟವು ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ವೇದಿಕೆಯಾಗುವುದರ ಜೊತೆಗೆ,ಗ್ರಾಮೀಣ ಜನರನ್ನು ಒಗ್ಗೂಡಿಸುವ ಉತ್ತಮ ಕಾರ್ಯಕ್ರಮವಾಗಲಿ ಎಂದು ಶುಭ ಹಾರೈಸಿದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಮಾತನಾಡಿ ಸಂಘದ ಸುವರ್ಣ ಸಂಭ್ರಮ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಕೆಸರುಗದ್ದೆ ಕ್ರೀಡಾಕೂಟವು ಒಂದಾಗಿದೆ. ಎಲ್ಲರೂ ಒಂದು ದಿನ ಸಂಭ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಸಿಇಓ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಹೇಮಂತ್ ಕಟ್ಟೆ, ಕೊರಗಪ್ಪ,ದೇಜಪ್ಪ ಪೂಜಾರಿ, ಧರ್ಣಪ್ಪ, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿಕೆ,ಮಮತಾ, ಸುಂದರಿ ಹಾಗೂ ದೇವಸ್ಥಾನದ ಆರ್ಚಕರಾದ ಪ್ರಸನ್ನ ಮಯ್ಯ, ಪ್ರವೀಣ್ ಮಯ್ಯ, ಸತೀಶ್ ಕೆ ಬರಮೇಲು ಸೇರಿದಂತೆ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya
error: Content is protected !!