31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ‘ಥಿಯೇಟರ್ ಇನ್ ಡೈಲಾಗ್’ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಇಂಗ್ಲಿಷ್ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವತಿಯಿಂದ ‘ಥಿಯೇಟರ್ ಇನ್ ಡೈಲಾಗ್: ಈಸ್ಟರ್ನ್ ಆ್ಯಂಡ್ ವೆಸ್ಟರ್ನ್ ಟ್ರಡಿಷನ್ಸ್, ಎನ್‌ಕೌಂಟರ್ಸ್ ಆ್ಯಂಡ್ ಎಕ್ಸ್‌ಪೆರಿಮೆಂಟೇಷನ್ಸ್’ ಎಂಬ ವಿಷಯದ ಕುರಿತು ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಮಾಧವ ಭಟ್ ಎಚ್. ಚಾಲನೆ ನೀಡಿ, ‘ಥಿಯೇಟರ್ ಇನ್ ಡೈಲಾಗ್’ ಎಂಬ ಪರಿಕಲ್ಪನೆಯು ಸದಾ ಹೊಸತನ ಹಾಗೂ ಕುತೂಹಲವನ್ನು ಮೂಡಿಸುವುದರ ಜೊತೆಗೆ ರಂಗಭೂಮಿಯಲ್ಲಿನ ವಿವಿಧ ಚಲನಶೀಲ ಪ್ರಯೋಗಗಳು ಮತ್ತು ಸೃಜನಾತ್ಮಕ ಅಭ್ಯಾಸಗಳನ್ನು ಅನ್ವೇಷಿಸಲು ಅವಕಾಶ ನೀಡುತ್ತದೆ. ಇಂತಹ ರಂಗಭೂಮಿ ಸಂವಾದಗಳು ವಿಭಿನ್ನ ಸಂಸ್ಕೃತಿಗಳ ನಡುವಿನ ಅರಿವು ಮತ್ತು ಸಾಂಸ್ಕೃತಿಕ ಅನುಭವವನ್ನು ವಿಸ್ತರಿಸುವುದರೊಂದಿಗೆ, ಸ್ಥಳೀಯ ಹಾಗೂ ಸ್ವದೇಶಿ ರಂಗಭೂಮಿ ಪರಂಪರೆಗಳನ್ನು ಪರಿಚಯಿಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದರು.

ರಂಗಭೂಮಿಯ ಸಾಧ್ಯತೆಗಳು ಅತ್ಯಂತ ವಿಶಾಲವಾಗಿದ್ದು, ಅದರ ವೇದಿಕೆ ಕೇವಲ ಪ್ರದರ್ಶನಕ್ಕೆ ಸೀಮಿತವಾಗದೆ ಹೊಸ ಚಿಂತನೆ, ಪ್ರಯೋಗ ಹಾಗೂ ಸೃಜನಶೀಲತೆಗೆ ದೊಡ್ಡ ಅವಕಾಶವನ್ನು ಒದಗಿಸುತ್ತದೆ. ವಿವಿಧ ರಂಗಭೂಮಿ ಪರಂಪರೆಗಳ ಪರಿಚಯವು ವಿದ್ಯಾರ್ಥಿಗಳ ಜ್ಞಾನ, ಕಲ್ಪನಾಶಕ್ತಿ ಮತ್ತು ಸಾಂಸ್ಕೃತಿಕ ಅರಿವನ್ನು ವಿಸ್ತರಿಸುವುದರ ಜೊತೆಗೆ, ಭವಿಷ್ಯದಲ್ಲಿ ಹೊಸ ಸಾಧ್ಯತೆಗಳನ್ನು ಅನ್ವೇಷಿಸಲು ಪ್ರೇರಣೆ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಮಾತನಾಡಿ,
ಇಂಗ್ಲಿಷ್ ಭಾಷೆ ಮತ್ತು ಸಾಹಿತ್ಯವು ಇಂದಿನ ಜಾಗತಿಕ ಸಂದರ್ಭದಲ್ಲಿ ಅತ್ಯಂತ ಮಹತ್ವವನ್ನು ಹೊಂದಿದ್ದು, ವಿಶ್ವದ ವಿವಿಧ ಭಾಗಗಳ ಜನರನ್ನು ಹಾಗೂ ಸಂಸ್ಕೃತಿಗಳನ್ನು ಸಂಪರ್ಕಿಸುವ ಪ್ರಮುಖ ಮಾಧ್ಯಮವಾಗಿದೆ. ಇಂಗ್ಲಿಷ್ ಭಾಷೆಯ ಜ್ಞಾನವು ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಸಂವಹನ ನಡೆಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಅನ್ವೇಷಿಸಲು ಸಹಕಾರಿಯಾಗುತ್ತದೆ.

ಭಾಷಾ ಜ್ಞಾನವು ಕೇವಲ ಶೈಕ್ಷಣಿಕ ಅರ್ಹತೆಯಲ್ಲದೆ, ವೃತ್ತಿಜೀವನದ ಹಲವು ಹೊಸ ಸಾಧ್ಯತೆಗಳಿಗೆ ದಾರಿ ಮಾಡಿಕೊಡುವ ಪ್ರಮುಖ ಕೌಶಲ್ಯವಾಗಿದೆ.
ಈ ರಾಷ್ಟ್ರೀಯ ವಿಚಾರ ಸಂಕಿರಣವು ಎಸ್‌.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಯ ಜೊತೆಗೆ ಸುತ್ತಮುತ್ತಲಿನ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅತ್ಯಂತ ಉಪಯುಕ್ತವಾಗಿದೆ ಎಂದರು.

ಕಾರ್ಯಕ್ರಮದ ಸಂಯೋಜಕರಾಗದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರು ಹಾಗೂ ಐಕ್ಯೂಎಸಿ ಸಂಯೋಜಕರಾದ ಗಜಾನನ ಆರ್. ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಇಎಫ್‌ಎಲ್ ವಿಶ್ವವಿದ್ಯಾಲಯ, ಹೈದರಾಬಾದ್‌ನ ಅನುವಾದ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ತಾರಕೇಶ್ವರ ವಿ. ಬಿ. ಹಾಗೂ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಂದ್ರ ಎಂ. , ಇಂಗ್ಲಿಷ್ ವಿಭಾಗದ ಮುಖ್ಯಸ್ಥರು ಹಾಗೂ ಐಕ್ಯೂಎಸಿ ಸಂಯೋಜಕರಾದ ಗಜಾನನ ಆರ್. ಭಟ್, ಇಂಗ್ಲಿಷ್ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆಷಡಾ. ಮಂಜುಶ್ರೀ ಆರ್. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಕುಲಸಚಿವ ಪ್ರೊ ಶ್ರೀಧರ್ ಎನ್ ಭಟ್ಟ, ಪರೀಕ್ಷಾಂಗ ಕುಲಸಚಿವ ಪ್ರೊ ಗಣೇಶ್ ನಾಯಕ್, ಉಪಪ್ರಾಂಶುಪಾಲೆ ಕೆ ಪಿ ನಂದಕುಮಾರಿ, ಪಿಜಿ ವಿಭಾಗದ ಡೀನ್ ಡಾ. ಸೌಮ್ಯ ಬಿ ಪಿ, ಪ್ರಮುಖರು ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.

Related posts

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!