31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ: ಕುತ್ಯಾರು ಫ್ರೆಂಡ್ಸ್ ಆಯೋಜಿಸುವ ಪಿಲಿನಲಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ಇವರ ವತಿಯಿಂದ ಶಾಸಕ ಹರೀಶ್ ಪೂಂಜರವರ ಮಾರ್ಗದರ್ಶನದಲ್ಲಿ ನಡೆಯುವ ನವರಾತ್ರಿ ಹಬ್ಬದ ಪ್ರಯುಕ್ತ ಎರಡನೇ ವರ್ಷದ ಊದುಪೂಜೆ ಹಾಗೂ ಪಿಲಿನಲಿಕೆ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆಯನ್ನು ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಹಾಗೂ ಶಾಸಕ ಹರೀಶ್ ಪೂಂಜರವರು ಸೆ. 30 ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಅ. 15 ರಂದು ಊದು ಪೂಜೆ ಹಾಗೂ 16ರಂದು ಪಿಲಿನಲಿಕೆಯು ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸಹ ಪ್ರಭಾರಿಗಳಾದ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪ್ರಭು, ಬಿಎಂಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷರಾದ ಸುಂದರ್ ಹೆಗ್ಡೆ, ಬಿಜೆಪಿ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ , ಸದಸ್ಯರಾದ ಪ್ರಸಾದ್ ಸುದೇಮುಗೇರು, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸದಸ್ಯರಾದ ರಾಜೇಶ್ ಆರಂಬೋಡಿ, ಕುತ್ಯಾರು ಫ್ರೆಂಡ್ಸ್ ನ ಉಮೇಶ್ ಕುಲಾಲ್, ಪ್ರಕಾಶ್ ಆಚಾರ್ಯ, ಶರತ್ ಶೆಟ್ಟಿ, ಸ್ವಸ್ತಿಕ್, ಅರವಿಂದ ಲಾಯಿಲ, ಗಣೇಶ್ ಲಾಯಿಲ, ಕರುಣಾಕರ ಬಂಗೇರ, ಚಂದ್ರರಾಜ್, ಪವನ್ ಬಂಗೇರ, ಅಭಿಲಾಷ್ ಗೌಡ, ಜಗದೀಶ್ ಕನ್ನಾಜೆ, ಮಂಜುನಾಥ್ ವಿ, ದಿಗಂತ್ ಮತ್ತು ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya
error: Content is protected !!