ಕಳೆಂಜ: ಇಲ್ಲಿಯ ನಡುಜಾರ್ ಕಿರಿಯ ಪ್ರಾಥಮಿಕ ಶಾಲೆಗೆ ಸೆ. 29ರಂದು ಭೇಟಿ ನೀಡಿದ ಸಂಸದರಾದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜರವರು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎಂ. ಕೆ., ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ. ಬಿ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಮುಖಂಡರಾದ ಸೀತಾರಾಮ್ ಬೆಳಾಲು, ಯಶವಂತ ಪುದುವೆಟ್ಟು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.













