30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಹೆದ್ದಾರಿ ಗುರುವಾಯನಕೆರೆ–ಶಕ್ತಿನಗರ–ವೇಣೂರು ರಸ್ತೆ ದುರಸ್ತಿಗೆ ಚಾಲನೆ: ಶಾಸಕರಿಗೆ ಸಾರ್ವಜನಿಕರ ಅಭಿನಂದನೆ

ಬೆಳ್ತಂಗಡಿ‌: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ–ಶಕ್ತಿನಗರ–ವೇಣೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಈ ಬಾರಿಯ ಭಾರೀ ಮಳೆಯಿಂದಾಗಿ ತೀವ್ರವಾಗಿ ಹಾನಿಗೊಳಗಾಗಿ, ಹಲವೆಡೆ ಡಾಂಬರು ಕಿತ್ತುಹೋಗಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದವು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುವಂತಾಗಿತ್ತು.

ಸಾರ್ವಜನಿಕರ ಸಮಸ್ಯೆಯನ್ನು ಮನಗಂಡು ರೂ.25 ಲಕ್ಷ ಅನುದಾನವನ್ನು ಮೀಸಲಿಟ್ಟು ರಸ್ತೆಯ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹಾನಿಗೊಳಗಾದ ರಸ್ತೆ ಭಾಗಗಳನ್ನು ದುರಸ್ತಿಪಡಿಸುವ ಕಾಮಗಾರಿ ಇದೀಗ ಪ್ರಗತಿಯಲ್ಲಿದೆ.

ರಸ್ತೆಯ ದುರಸ್ತಿಗೆ ತುರ್ತಾಗಿ ಸ್ಪಂದಿಸಿ ಅನುದಾನ ಒದಗಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಸ್ಥಳೀಯ ಸಾರ್ವಜನಿಕರು ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya
error: Content is protected !!