November 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ಅತ್ಯಾಚಾರ ಪ್ರಕರಣ: ಮಂಗಳೂರಿನಲ್ಲಿ ಎಸ್.ಐ.ಟಿ ಕಚೇರಿ ಪರಿಶೀಲನೆ

ಮಂಗಳೂರು: ಪಾಂಗಳದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಅ.1ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿಗೆ ಆಗಮಿಸಿದ್ದಾರೆ.

ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್ ಹಾಗೂ ಲೋಕೇಶ್ ಜಗಲಸಾರ್ ಅವರು ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ SIT ಕಚೇರಿಗೆ 12:15 ಕ್ಕೆ ಭೇಟಿ ನೀಡಿದ್ದಾರೆ.

ನೂತನವಾಗಿ ವ್ಯವಸ್ಥೆಗೊಳಿಸಲಾಗಿರುವ SIT ಕಚೇರಿಯಲ್ಲಿನ ಮೂಲಸೌಕರ್ಯ ಹಾಗೂ ಅಗತ್ಯ ವ್ಯವಸ್ಥೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದ ಸಂಸದರ ಕಚೇರಿ ಹಾಗೂ SAF (Special Action Force) ಕಚೇರಿ ಇರುವ ಕಟ್ಟಡದಲ್ಲೇ ಇದೀಗ ಸೌಜನ್ಯ ಪ್ರಕರಣದ ತನಿಖೆಗಾಗಿ SIT ಕಚೇರಿ ತೆರೆಯಲಾಗಿದೆ.

SIT ಅಧಿಕಾರಿಗಳ ಮಂಗಳೂರಿನ ಭೇಟಿ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ತನಿಖಾ ಪ್ರಕ್ರಿಯೆಗಳ ಬಗ್ಗೆ ಕುತೂಹಲ ಮೂಡಿದೆ.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!