30.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಮ್ ಆರ್ ಪಿಎಲ್ ಘಟನೆ: ಕಾರ್ಮಿಕರ ಸುರಕ್ಷತೆ ಮತ್ತು ಕುಟುಂಬಗಳ ಹಕ್ಕುಗಳನ್ನು ಖಚಿತಪಡಿಸಬೇಕು – ಬಿಎಮ್ ಎಸ್

ಮಂಗಳೂರು: ಎಮ್ ಆರ್ ಪಿಎಲ್ ನಲ್ಲಿ ಸಂಭವಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಮಜ್ದೂರ್ ಸಂಘ (BMS) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರ ಕಳವಳ ವ್ಯಕ್ತಪಡಿಸುತ್ತದೆ.

ಈ ಘಟನೆಯಲ್ಲಿ ಕಾರ್ಮಿಕರು ಮೃತಪಟ್ಟಿರುವುದು ಹಾಗೂ ಕೆಲವರು ಗಾಯಗೊಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ನಮ್ಮ ಸಂಘಟನೆಯು ಸಂತಾಪ ಸೂಚಿಸುತ್ತಿದ್ದು, ಗಾಯಗೊಂಡಿರುವ ಕಾರ್ಮಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತದೆ.

ನಾವು ಸಂಘಟನೆಯಾಗಿ ಯಾರನ್ನೂ ಮುಂಚಿತವಾಗಿ ಆರೋಪಿಸಲು ಬಯಸುವುದಿಲ್ಲ. ಆದರೆ ಪ್ರತಿಯೊಬ್ಬ ಕಾರ್ಮಿಕನ ಜೀವವೂ ಅಮೂಲ್ಯ. ಈ ಘಟನೆಗೆ ನಿಖರವಾಗಿ ಕಾರಣವೇನು ಎಂಬುದು ಸಂಪೂರ್ಣವಾಗಿ ಹೊರಬರಬೇಕು. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ತಾಂತ್ರಿಕ ಹಾಗೂ ಕಾನೂನುಬದ್ಧ ರೀತಿಯಲ್ಲಿ ಸಮಗ್ರ ತನಿಖೆ ನಡೆಸಬೇಕು.

ಮೃತ ಮತ್ತು ಗಾಯಗೊಂಡ ಕಾರ್ಮಿಕರ ಕುಟುಂಬಗಳ ಕಾನೂನುಬದ್ಧ ಹಕ್ಕುಗಳು, ಪರಿಹಾರ, ವೈದ್ಯಕೀಯ ನೆರವು ಹಾಗೂ ಇತರ ಸೌಲಭ್ಯಗಳು ಯಾವುದೇ ವಿಳಂಬವಿಲ್ಲದೆ ದೊರೆಯುವಂತೆ MRPL ಆಡಳಿತ ಮತ್ತು ಸಂಬಂಧಪಟ್ಟ ಗುತ್ತಿಗೆದಾರರು ಕ್ರಮ ಕೈಗೊಳ್ಳಬೇಕು.

ಅದೇ ರೀತಿ MRPLನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಶ್ವತ ಹಾಗೂ ಗುತ್ತಿಗೆ ಕಾರ್ಮಿಕರ ಸುರಕ್ಷತಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ಅಗತ್ಯವಿರುವ safety training, PPE, work permit, emergency preparedness ಹಾಗೂ ಇತರ ಸುರಕ್ಷತಾ ಕ್ರಮಗಳು ಪರಿಣಾಮಕಾರಿಯಾಗಿ ಜಾರಿಯಲ್ಲಿವೆಯೇ ಎಂಬುದನ್ನು ಪರಿಶೀಲಿಸಬೇಕು.

ಘಟನೆಯ ಸಂಪೂರ್ಣ ಸತ್ಯಾಂಶ ಹೊರಬಂದ ನಂತರ, ತನಿಖೆಯಲ್ಲಿ ಯಾರದ್ದೇ ತಪ್ಪು ಅಥವಾ ನಿರ್ಲಕ್ಷ್ಯ ಸಾಬೀತಾದಲ್ಲಿ, ಕಾನೂನು ಪ್ರಕಾರ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು.

ಬಿಎಮ್ ಎಸ್ ನ ನಿಲುವು ಸ್ಪಷ್ಟವಾಗಿದೆ: ಕಾರ್ಮಿಕರ ಸುರಕ್ಷತೆ ಮೊದಲು – ಕಾರ್ಮಿಕರ ಕುಟುಂಬಗಳ ನ್ಯಾಯ ಮೊದಲು.

ಈ ಸಂದರ್ಭದಲ್ಲಿ MRPL ಆಡಳಿತ, ಕಾರ್ಮಿಕ ಇಲಾಖೆ, ಕೈಗಾರಿಕಾ ಸುರಕ್ಷತಾ ಅಧಿಕಾರಿಗಳು ಹಾಗೂ ಜಿಲ್ಲಾಡಳಿತವು ಸಮನ್ವಯದಿಂದ ಕಾರ್ಯನಿರ್ವಹಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು BMS ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ ಎಂದುಭಾರತೀಯ ಮಜ್ದೂರ್ ಸಂಘ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ತಿಳಿಸಿದ್ದರೆ.

Related posts

ಲಾಯಿಲ: ಕಕ್ಕೆಜಾಲು ನಿವಾಸಿ ದೂಜ ಕುಮಾರ್ ನಿಧನ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya
error: Content is protected !!