ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27 ನೇ ಸಾಲಿನ ಕೊಕ್ಕಡ ನಿಡ್ಲೆ ಪೆರ್ಲ ಕ್ಲಸ್ಟರ್ ಗಳ ವಲಯ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಶಿಶಿಲದ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿನಿ ಕು|| ಕಾವ್ಯಾ 600ಮೀ ಹಾಗೂ400 ಮೀ ನಲ್ಲಿ ಪ್ರಥಮ ಮತ್ತು 200 ಮೀ ನಲ್ಲಿ ತೃತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಮತ್ತು


ಬಾಲಕಿಯರ ತಂಡ 4×100 ರಿಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.













