32 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಭಕ್ತಿ ಹಾಗೂ ಗೌರವದಿಂದ ಆಚರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಟಿ. ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಶಿಕ್ಷಕರು ಹಾಗೂ ವಿದ್ಯಾರ್ಥಿ ನಾಯಕರು ಪುಷ್ಪಾರ್ಚನೆ ಸಲ್ಲಿಸಿದರು.

ಹಿರಿಯ ಶಿಕ್ಷಕರಾದ ಚಂದ್ರಶೇಖರ್ ಭಟ್ ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ, ಸರಳತೆ, ದೇಶಪ್ರೇಮ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ಕೈಗೊಂಡ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ಸ್ವಚ್ಛತೆಯ ಮಹತ್ವವನ್ನು ಸಾರಿದರು.

Related posts

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!