32 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕಕ್ಯಪದವು: ಸತ್ಯ, ಅಹಿಂಸೆ, ಸರಳತೆ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಹನೀಯರ ಆದರ್ಶಗಳಿಗೆ ಗೌರವ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ಮುಖ್ಯಶಿಕ್ಷಕಿ ಶ್ರೀಮತಿ ವಿಜಯಾ ಕೆ. ಮಾತನಾಡಿ, ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಚ್ಛತೆಯ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು. ಪ್ರೌಢ ವಿಭಾಗದ ಸಹಶಿಕ್ಷಕಿ ಶ್ರೀಮತಿ ಸೌಮ್ಯಾ ಕೆ. ಅವರು ಗಾಂಧೀಜಿ ಹಾಗೂ ಶಾಸ್ತ್ರಿಯವರ ಸರಳ ಜೀವನ, ಪ್ರಾಮಾಣಿಕತೆ ಮತ್ತು ದೇಶಪ್ರೇಮದಂತಹ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಸಂಯೋಜಕರು, ಮುಖ್ಯಶಿಕ್ಷಕಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಸಹಶಿಕ್ಷಕ ಕೆ. ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಪ್ರತಿಮಾ ವಂದನಾರ್ಪಣೆ ಸಲ್ಲಿಸಿದರು.

Related posts

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya
error: Content is protected !!