31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನ ಸಾಧನಾ ಸಮಾವೇಶ

ಧರ್ಮಸ್ಥಳ: ಗಾಂಧಿ ಜಯಂತಿಯ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಅ. 2 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ “ಗಾಂಧಿ ಸ್ಮೃತಿ ಮತ್ತು ನವಜೀವನ ಸಾಧನಾ ಸಮಾವೇಶ” ಯಶಸ್ವಿಯಾಗಿ ಆಯೋಜನೆ ಗೊಂಡಿತು.

ದುಶ್ಚಟಮುಕ್ತ ಸಮಾಜದ ನಿರ್ಮಾಣಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮ ದಲ್ಲಿ ಸುಬ್ರಹ್ಮಣ್ಯ ಮಠದ ಜಗದ್ಗುರು ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿದರು.

ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್. ಅವರು ಆಶಯ ಭಾಷಣ ಮಾಡಿದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷರಾದ ನಟರಾಜ್ ಬಾದಾಮಿ ಭಾಗವಹಿಸಿದ್ದರು.
ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲ್ಯಾನ್, ಸಮಾಜ ಸೇವಕ ಆರ್.ಬಿ ಹೆಬ್ಬಳ್ಳಿ ಮುಂಬೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್ ವಿ.ಪಾಯಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ತಾಲೂಕು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಗಿರೀಶ್ ಕೆ.ಎಸ್, ಮೂಡಬಿದಿರೆ ತಾಲೂಕು ಅಧ್ಯಕ್ಷ ವಾಸುದೇವ ನಾಯಕ್, ಮಂಗಳೂರು ತಾಲೂಕು ಅಧ್ಯಕ್ಷ ಶ್ರೀ ಮತಿ ಸುಖಲತಾ ಶೆಟ್ಟಿ, ಬಂಟ್ವಾಳ ತಾಲೂಕು ಅಧ್ಯಕ್ಷ ರಾಜಾರಾಮ ಶೆಟ್ಟಿ ಗೌರವ ಉಪಸ್ಥಿತರಿದ್ದರು.

ಕೇಶವ ಚಾಮಾ೯ಡಿ, ಪದ್ಮನಾಭ ಬಂಟ್ವಾಳ, ಶ್ರೀಮತಿ ಸುಕನ್ಯಾ ಅನುಭವ ಹಂಚಿಕೊಂಡರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್ ವಿ.ಪಾಯಿಸ್ ಪದಗ್ರಹಣ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಮಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಕಾರಂತ್ ಉಪಸ್ಥಿತರಿದ್ದರು.

ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾಥ೯ನೆ ಬಳಿಕ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಧನ್ಯವಾದವಿತ್ತರು.ಕಾಯ೯ಕ್ರಮದಲ್ಲಿ ಸುಮಾರು 2 ಸಾವಿರಕ್ಕೂ ಮಿಕ್ಕಿ ನವಜೀವನ ಸಮಿತಿ ಸದಸ್ಯರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya
error: Content is protected !!