31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊಕ್ಕಡ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳ ಕ್ರೀಡಾಕೂಟ ಅ.01 ರಂದು ನಡೆಯಿತು.
ನಿವೃತ್ತ ಮುಖ್ಯ ಶಿಕ್ಷಕರಾದ ರಾಜಗುರು ಹೆಬ್ಬಾರ್ ಅವರು ದೀಪ ಬೆಳಗಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಲಕ್ಷ್ಮಣ ಗೌಡ ವಹಿಸಿದ್ದರು. ಪ್ರೌಢಶಾಲಾ ನೋಡಲ್ ಶಿಕ್ಷಕರಾದ ವಿಜಯಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಥಮಿಕ ಶಾಲೆಯ ನೋಡಲ್ ಶಿಕ್ಷಕರಾದ ಶ್ರೀಧರ್ , ಸಿ. ಆರ್.ಪಿ
ವಿಲ್ ಫ್ರೆಡ್, ಹಿರಿಯರಾದ ವೀರೇಶ್ವರ ಹೆಬ್ಬಾರ್ ಉಪಸ್ಥಿತರಿದ್ದರು.

ಪ್ರಧಾನ ಮುಖ್ಯ ಶಿಕ್ಷಕರಾದ ಶರತ್ ಕುಮಾರ್ ಸ್ವಾಗತಿಸಿದರು. ಶೋಲಿ ವಿ ಜೆ ನಿರೂಪಿಸಿದರು. ವಲಯದ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಕೂಟವನ್ನು ಉತ್ತಮವಾಗಿ ನಡೆಸಿಕೊಟ್ಟರು.
ತಂಡದ ಮೇಲ್ವಿಚಾರಕರಾಗಿ ವಲಯದ ಶಾಲೆಗಳ ಸಹ ಶಿಕ್ಷಕರು, ವಲಯದ ಎಲ್ಲ ಶಾಲೆಗಳ ಕ್ರೀಡಾಪಟುಗಳು ಭಾಗವಹಿಸಿದರು. ಶಾಲಾ ಎಸ್ ಡಿ ಎಂ ಸಿ‌ಯ ಸದಸ್ಯರು ಮತ್ತು ಪೋಷಕರು, ಶಾಲಾ ಶಿಕ್ಷಕರು, ಸಿಬ್ಬಂದಿಗಳು ವಿದ್ಯಾರ್ಥಿಗಳು ಮತ್ತು ಊರವರ ಸಹಕಾರದಿಂದ ಕ್ರೀಡಾಕೂಟವು ಯಶಸ್ವಿಯಾಗಿ ನಡೆಯಿತು.

Related posts

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದ ಆಶ್ರಯದಲ್ಲಿ ಆಟೋಟ ಸ್ಪರ್ಧೆ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya
error: Content is protected !!