32 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು ಇಲ್ಲಿ ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪಿತ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು.

ಸಭೆಯ ಅಧ್ಯಕ್ಷಸ್ಥಾನವನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, “ರಾಷ್ಟ್ರಪಿತ ಗಾಂಧೀಜಿಯವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧೀಜಿಯವರ ಅಹಿಂಸೆಯ ಚೈತನ್ಯವು ನಮ್ಮನ್ನು ಶಾಂತಿಯುತ ಪ್ರಪಂಚದತ್ತ ಮುನ್ನಡೆಸಲಿ. ಸಿಯೋನ್ ಆಶ್ರಮದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು. ಹಿರಿಯರನ್ನು ಗೌರವಿಸದೆ, ತಿರಸ್ಕರಿಸಿದಾಗ ಉಂಟಾಗುವ ಪರಿಣಾಮವನ್ನು ಒಂದು ಸಣ್ಣ ಕಥೆಯ ಮೂಲಕ ನಿರೂಪಿಸಿದರು. ಹಿರಿಯರಿಗೆ ನೆಮ್ಮದಿಯ ಬದುಕನ್ನು ಕಲ್ಪಿಸಿಕೊಡುವುದರಿಂದ ಮಾನವ ಜನ್ಮ ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ಹಾಗೂ ಸಿಯೋನ್ ಆಶ್ರಮದಲ್ಲಿ ಯಾವುದೇ ಜಾತಿ-ಮತ, ಬೇಧ-ಭಾವವಿಲ್ಲದೇ ಬೇರೆ ಬೇರೆ ಧರ್ಮದ ವಿಶಿಷ್ಠ ಸಾಧನೆಗೈದ ಮೂವರು ಹಿರಿಯ ನಾಗರಿಕರನ್ನು ಗುರುತಿಸಿ, ಪ್ರತಿ ವರ್ಷ ಸನ್ಮಾನಿಸಲಾಗುವುದೆಂದು ತಿಳಿಸಿದರು.

” ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೈಂಟ್ ತೋಮಸ್ ಚರ್ಚ್ ಗಂಡಿಬಾಗಿಲಿನ ಧರ್ಮಗುರುಗಳಾದ ರೆ. ಫಾ. ವಿನೋಯ್ ಮಾಳಿಗೈಯಿಲ್ ಮಾತನಾಡಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಅಹಿಂಸೆಯ ಮಾರ್ಗವನ್ನು ಅನುಸರಿಸಿದ ರೀತಿ ಹಾಗೂ ಅವರ ಹೋರಾಟವು ದೇಶದ ಚರಿತ್ರೆಯಲ್ಲಿ ತಂದ ಬದಲಾವಣೆಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಸಿಯೋನ್ ಆಶ್ರಮದಲ್ಲಿ ನಡೆಯುತ್ತಿರುವ ಸೇವಾ ಕಾರ್ಯಗಳು ಹಾಗೂ ವಿವಿಧ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು.


ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಪುನ್ಕೆತ್ಯಾರು ಎಂಬಲ್ಲಿ ವಾಸವಾಗಿರುವ ಹಿರಿಯ ಪ್ರಖ್ಯಾತ ನಾಟಿ ವೈದ್ಯರಾದ ಬೇಬಿ ಪೂಜಾರಿ, ತೋಟತ್ತಾಡಿ ಗ್ರಾಮದ ದಡ್ಡು ಎಂಬಲ್ಲಿ ವಾಸವಾಗಿರುವ ಹಿರಿಯ ಸಮಾಜ ಸೇವಕರಾದ ಡಿ.ಎ.ರಹಿಮಾನ್ ಹಾಗೂ ನೆರಿಯ ಗ್ರಾಮದ ಕಲ್ಕಾರ್ ಎಂಬಲ್ಲಿ ವಾಸವಾಗಿರುವ ಹಿರಿಯ ನಿವೃತ್ತ ಶಿಕ್ಷಿಕಿ ಶ್ರೀಮತಿ ದ್ರೌಪದಿ ಅಮ್ಮಾಳ್ ಇವರುಗಳನ್ನು ಪ್ರಮಾಣ ಪತ್ರ, ಫಲಪುಷ್ಪಗಳೊಂದಿಗೆ, ಪೇಟಾ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸನ್ಮಾನಿಸಲ್ಪಟ್ಟ ಹಿರಿಯ ನಾಗರಿಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು. ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಮಂಗಳೂರಿನ ಉಪನ್ಯಾಸಕರಾದ ಶ್ರೀಯುತ ಜಯಪ್ರಕಾಶ್ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಿಯೋನ್ ಚಾಪ್ಲಿಯನ್ ರೆ.ಫಾ.ಡಾ.ಮೆಲ್ವಿನ್ ಡಿ’ಸಿಲ್ವ, ತಾಲೂಕು ನಿವೃತ್ತ ವೈದ್ಯಾಧಿಕಾರಿ ಶ್ರೀಯುತ ಡಾ. ಕಲಾಮಧು ಶೆಟ್ಟಿ, ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿ, ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಹಾಗೂ ಅಶ್ರಮ ನಿವಾಸಿಯಾದ ಮುರುಗೇಶ್ ರವರು ವೇದಿಕೆಯನ್ನಲಂಕರಿಸಿದ್ದರು.


ಎಸ್.ಕೆ.ಡಿ.ಆರ್.ಡಿ.ಪಿ. ಸಂಘದ ಸದಸ್ಯರುಗಳು, ಶ್ರೀನಿವಾಸ್ ಕಾಲೇಜ್ ಆಫ್ ನರ್ಸಿಂಗ್ ಮಂಗಳೂರಿನ ವಿದ್ಯಾರ್ಥಿಗಳು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದರು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು, ಆಡಳಿತಾಧಿಕಾರಿ ಶೋಭಾ ಯು.ಪಿ. ಸ್ವಾಗತಿಸಿ, ಸಿಬ್ಬಂದಿ ಆಶಾ ಸುಧಾಕರ್ ವಂದಿಸಿದರು.

Related posts

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ಕಡಿರುದ್ಯಾವರ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya
error: Content is protected !!