November 18, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ (ರಾಜ್ಯ ಪಠ್ಯಕ್ರಮ) ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದಲ್ಲಿ ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮವು *ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಘುಪತಿ ರಾಘವ ಭಜನೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಭಕ್ತಿಯ ಸೊಬಗು ತಂದರು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ *ಪುಷ್ಪಾರ್ಚನೆ ಸಲ್ಲಿಸಲಾಯಿತು.

ವೈಭವ್ ರಾವ್ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಾತಂತ್ರ್ಯ ಹೋರಾಟದ ಕೊಡುಗೆಗಳ ಕುರಿತು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ, ದೇಶಭಕ್ತಿ ಹಾಗೂ “ಜೈ ಜವಾನ್, ಜೈ ಕಿಸಾನ್” ಎಂಬ ಮಹತ್ವದ ಸಂದೇಶದ ಕುರಿತು ಭಾಷಣ ಮಾಡಿದರು.

ಇಬ್ಬರು ಮಹಾನ್ ನಾಯಕರ ಆದರ್ಶಗಳು, ತ್ಯಾಗ ಮತ್ತು ದೇಶಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮ ಸಾರಿತು. ಕಾರ್ಯಕ್ರಮವು ದೇಶಭಕ್ತಿ ಹಾಗೂ ರಾಷ್ಟ್ರನಾಯಕರ ಮೇಲಿನ ಗೌರವವನ್ನು ಮತ್ತಷ್ಟು ಬಲಪಡಿಸಿತು. ನಂತರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅದ್ಯತ್ ಕಾರ್ಯಕ್ರಮ ನಿರೂಪಿಸಿದರು, ಹರೀಶ್ ಪಟೇಲ್ ವಂದನಾರ್ಪಣೆಗೈದರು.

Related posts

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya

ಖಾಸಗಿ ಸಾರಿಗೆ ಕಾರ್ಮಿಕರ 12 ಬೇಡಿಕೆಗಳ ಈಡೇರಿಕೆಗೆ ಮಜ್ದೂರ್ ಮಹಾಸಂಘದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya
error: Content is protected !!