31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ : ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ನಡೆಯಿತು. ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಮಹನೀಯರ ಆದರ್ಶ, ಸರಳತೆ, ಸತ್ಯ, ಅಹಿಂಸೆ ಹಾಗೂ ದೇಶಭಕ್ತಿಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ತರಗತಿವಾರು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಪ್ರಿಯದರ್ಶಿನಿ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ, ಆದರ್ಶಗಳು ಮತ್ತು ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಮಾತನಾಡಿದರು. ಮಹನೀಯರ ಜೀವನಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.

ವಿದ್ಯಾರ್ಥಿನಿ ರಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya
error: Content is protected !!