32 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಂಚಿನ ಪದಕ

ಕಕ್ಯಪದವು: ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬಿ.ಸಿ.ರೋಡ್‌ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 2ರಂದು ನಡೆದ 14ರಿಂದ 17 ವರ್ಷದೊಳಗಿನ ಬಾಲಕ-ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. 17 ವರ್ಷ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿದ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು.

ವಿದ್ಯಾರ್ಥಿಯ ಈ ಸಾಧನೆಯು ಸಂಸ್ಥೆಗೆ ಹೆಮ್ಮೆ ತಂದಿದ್ದು, ಅವರ ಪರಿಶ್ರಮ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿ ಮತ್ತು ಮಾರ್ಗದರ್ಶನ ಶ್ಲಾಘನೀಯವಾಗಿದೆ.

ವಿದ್ಯಾರ್ಥಿಗೆ ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಪೃಥ್ವಿರಾಜ್ ಅವರ ಪ್ರಯತ್ನವನ್ನು ಸಂಸ್ಥೆಯು ಪ್ರಶಂಸಿಸಿದೆ.

Related posts

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಕಡಿತಗೊಂಡಿದ್ದ ಅಂಬಡಬೆಟ್ಟು ತಾತ್ಕಾಲಿಕ ರಸ್ತೆಗೆ ಶಾಸಕ ಹರೀಶ್ ಪೂಂಜರ ಸ್ಪಂದನೆ

Suddi Udaya
error: Content is protected !!