ಬೆಳ್ತಂಗಡಿ : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರೂ ಮಹನೀಯರು ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧೀಜಿ, ಸತ್ಯ, ಅಹಿಂಸೆ, ಉಪವಾಸ ಸತ್ಯಾಗ್ರಹಗಳ ಮೂಲಕ ಸ್ವಾತಂತ್ರ್ಯ ಹೋರಾಟ ನಡೆಸಿದರು. ಶಾಸ್ತ್ರಿಗಳ ಸರಳತೆ ಸಜ್ಜನಿಕೆಯ ವ್ಯಕ್ತಿತ್ವ ಆದರ್ಶನೀಯ ಎಂದು ತಹಸೀಲ್ದಾರ್ ಎಸ್. ಎನ್. ನರಗುಂದ ಹೇಳಿದರು.
ಅವರು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಗಳು ದೇಶದ ಏಳಿಗೆಗಾಗಿ ಮಾಡಿದ ನಿಸ್ವಾರ್ಥ ಸೇವೆ ಇಡೀ ಜಗತ್ತಿಗೆ ಮಾದರಿಯಾಗಿದೆ. ಸಮಾಜಕ್ಕಾಗಿ ದುಡಿಯುವವರು ಜನರ ಮನದಲ್ಲಿ ಜಜ್ಜನಜನಿತವಾಗಿ ಉಳಿಯುತ್ತಾರೆ ಎಂದು ನುಡಿದರು.
ಭೂದಾಖಲೆಗಳ ಸಹಾಯಕ ನಿರ್ದೇಶಕಿ ಲೀಲಾವತಿ, ಉಪತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ, ಆಹಾರ ನಿರೀಕ್ಷಕ ಸಂತೋಷ್ ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶು ಸಂಗೋಪಾನ, ಸಮಾಜ ಕಲ್ಯಾಣ ಇಲಾಖೆ, ಸಹಕಾರ ಅಭಿವೃದ್ಧಿ, ಖಜಾನೆ ಇಲಾಖೆಯವರು ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.
ಇನ್ನೂ ಉಳಿದ ಇಲಾಖೆಗಳು ಗೈರು ಹಾಜರಾಗುವ ಪದ್ದತಿಯನ್ನು ಯಾಥವತ್ತಾ ಮುಂದುವರಿಸಿಕೋಂಡು ಹೋಯಿತು.
ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರಥ್ವಿ, ವಿದ್ಯಾಶ್ರೀ, ಅಶ್ವಿನಿ, ವಿಕ್ಷೀತಾ ವಂದೇ ಮಾತರಂ ಹಾಗೂ ನಾಡಗೀತೆ ಹಾಡಿದರು.













