31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಶಿವಾನಿ ಸಂಜೀವಿನಿ ಒಕ್ಕೂಟದ ಮಹಾಸಭೆ

ಮಲವಂತಿಗೆ : ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮಲವಂತಿಗೆ ಇದರ 2025-26 ಸಾಲಿನ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

LCRP ವಿನೋದ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಭೆಯನ್ನು ಉದ್ದೇಶಿಸಿ ಶುಭ ಹಾರೈಸಿದರು. ಕೃಷಿ ಸಖಿ ವಾರ್ಷಿಕ ವರದಿ , ಪಶು ಸಖಿ ಜಮಾ ಖರ್ಚಿನ ವರದಿ ಮಂಡಿಸಿ ಸರ್ವ ಸದಸ್ಯರಿಂದ ಅನುಮೋದನೆ ಪಡೆಯಲಾಯಿತು. ಒಣಕಸ ಸಂಗ್ರಹ,ಸ್ವಚ್ಛತಾ ಕಾರ್ಯಕ್ರಮ ಮುಂತಾದವುಗಳ ಬಗ್ಗೆ ಸದಸ್ಯರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.ವಲಯ ಮೇಲ್ವಿಚಾರಕರದ ಜಯಾನಂದ ಸಂಜೀವಿನಿ ಧ್ಯೇಯೋದ್ದೇಶಗಳನ್ನು ತಿಳಿಸಿಕೊಡುವುದರೊಂದಿಗೆ ನೂತನ ಪದಾಧಿಕಾರಿಯವರ ಆಯ್ಕೆ ಪ್ರಕ್ರಿಯೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಟ್ಟರು ನಂತರ ಅಧಿಕಾರ ಹಸ್ತಾಂತರಿಸಿ ಪದಗ್ರಹಣ ಮಾಡಲಾಯಿತು.

ಒಕ್ಕೂಟದ ನಿರ್ಗಮಿತ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಲಿಂಗತ್ವ ದೌರ್ಜನ್ಯ, FNHW ಬಗ್ಗೆ ಮಾಹಿತಿ ನೀಡಲಾಯಿತು.ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ,ರೇಖಾ ಕಾರ್ಯಕ್ರಮ ನಿರೂಪಿಸಿದರು. ಪೂರ್ಣಿಮ ಧನ್ಯವಾದವಿತ್ತರು.

Related posts

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya
error: Content is protected !!