ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ, ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಬಿ. ಸಿ ರೋಡ್ ಇದರ ಸಂಯುಕ್ತ ಆಶ್ರಯದಲ್ಲಿ ಅ. 1ರಂದು ನಡೆದ ಬಂಟ್ವಾಳ ತಾಲ್ಲೂಕು ಮಟ್ಟದ 14-17ರ ವಯೋಮಾನದ ಬಾಲಕ ಬಾಲಕಿಯರ ಕ್ರೀಡಾ ಕೂಟದಲ್ಲಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು 17ರ ವಯೋಮಾನದ ವಿದ್ಯಾರ್ಥಿನಿಯಾದ ಕು.ಧನ್ವಿತಾ ಅತ್ಯುತ್ತಮ ಪ್ರದರ್ಶನ ನೀಡಿ ಜಾವಲಿನ್ (ಈಟಿ ಎಸೆತ ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ ಮತ್ತು ಪ್ರಥ್ವಿರಾಜ್ ಇವರು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿರುತ್ತಾರೆ.









