29 C
ಪುತ್ತೂರು, ಬೆಳ್ತಂಗಡಿ
October 2, 2026
Uncategorized

ಕುತ್ಲೂ ರು ಸರಕಾರಿ ಶಾಲೆಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್ ಬಂಗೇರಾ ಹಾಗೂ ಗ್ಲೋಬಲ್ ಸಿಂಪತಿ ಫೌಂಡೇಶನ್ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಪರಿಸರ ಪ್ರೇಮದ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆವರಣ ದಲ್ಲಿರುವ ಫ್ರೂಟ್ಸ್ ಪಾರ್ಕ್ ನಲ್ಲಿ ರಂಬೂಟಾನ್ ಗಿಡಗಳನ್ನು ನೆಟ್ಟು ಶುಭ ಕೋರಿದರು.
ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂತಾರಾಷ್ಟ್ರೀಯ ಜೂಡೋ ತರಬೇತುದಾರ ಯತೀಶ್ ಎನ್ ಬಂಗೇರಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿರುವ ಈ ಸರಕಾರಿ ಶಾಲೆ ಮಾದರಿಯಾಗಿದೆ. ಈ ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ ನೀಡಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಜೂಡೋ ತರಬೇತಿ ನೀಡಲಾಗುವುದು. ಈ ಮೂಲಕ ಒಲಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅರ್ಹತೆ ಪಡೆಯುವ ರೀತಿಯಲ್ಲಿ ತರಬೇತಿ ಕೊಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ಕನಕ ವರ್ಮ ಜೈನ್ ಶಾಲಾ ಮುಖ್ಯ ಗುರು ಫ್ಲೆವಿಯಾ ಡಿ ಸೋಜಾ, ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣೆ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!