31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸಾಧದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್   ಶಾಸ್ತ್ರಿ ಇಬ್ಬರೂ ಮಹನೀಯರು ದೇಶಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಗಾಂಧೀಜಿ, ಸತ್ಯ, ಅಹಿಂಸೆ, ಉಪವಾಸ ಸತ್ಯಾಗ್ರಹಗಳ ಮೂಲಕ ಸ್ವಾತಂತ್ರ್ಯ  ಹೋರಾಟ ನಡೆಸಿದರು. ಶಾಸ್ತ್ರಿಗಳ ಸರಳತೆ ಸಜ್ಜನಿಕೆಯ ವ್ಯಕ್ತಿತ್ವ ಆದರ್ಶನೀಯ ಎಂದು ತಹಸೀಲ್ದಾರ್ ಎಸ್. ಎನ್. ನರಗುಂದ ಹೇಳಿದರು.

ಅವರು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಡೆದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ  ರವರ ಜಯಂತಿ ಆಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಗಳು ದೇಶದ ಏಳಿಗೆಗಾಗಿ ಮಾಡಿದ ನಿಸ್ವಾರ್ಥ ಸೇವೆ ಇಡೀ ಜಗತ್ತಿಗೆ ಮಾದರಿಯಾಗಿದೆ. ಸಮಾಜಕ್ಕಾಗಿ ದುಡಿಯುವವರು ಜನರ ಮನದಲ್ಲಿ ಜಜ್ಜನಜನಿತವಾಗಿ ಉಳಿಯುತ್ತಾರೆ ಎಂದು ನುಡಿದರು.

ಭೂದಾಖಲೆಗಳ ಸಹಾಯಕ ನಿರ್ದೇಶಕಿ ಲೀಲಾವತಿ, ಉಪತಹಶೀಲ್ದಾರ್ ಮಲ್ಲಪ್ಪ ನಡುಗಡ್ಡಿ, ಆಹಾರ ನಿರೀಕ್ಷಕ ಸಂತೋಷ್ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶು ಸಂಗೋಪಾನ, ಸಮಾಜ ಕಲ್ಯಾಣ ಇಲಾಖೆ, ಸಹಕಾರ ಅಭಿವೃದ್ಧಿ, ಖಜಾನೆ ಇಲಾಖೆಯವರು ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.
ಇನ್ನೂ ಉಳಿದ ಇಲಾಖೆಗಳು ಗೈರು ಹಾಜರಾಗುವ ಪದ್ದತಿಯನ್ನು ಯಾಥವತ್ತಾ ಮುಂದುವರಿಸಿಕೋಂಡು ಹೋಯಿತು.
ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರಥ್ವಿ, ವಿದ್ಯಾಶ್ರೀ, ಅಶ್ವಿನಿ, ವಿಕ್ಷೀತಾ ವಂದೇ ಮಾತರಂ ಹಾಗೂ ನಾಡಗೀತೆ ಹಾಡಿದರು.

Related posts

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ಗೆ ದ್ವಿಪ್ರಥಮ

Suddi Udaya
error: Content is protected !!