29 C
ಪುತ್ತೂರು, ಬೆಳ್ತಂಗಡಿ
October 2, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಗಾಂಧೀಜಿ–ಶಾಸ್ತ್ರೀಜಿ ದಿನಾಚರಣೆ- ಸರಳತೆ, ಶಿಸ್ತು ಹಾಗೂ ದೇಶಪ್ರೇಮವೇ ಗಾಂಧೀಜಿ–ಶಾಸ್ತ್ರೀಜಿ ಆದರ್ಶ

ಬೆಳ್ತಂಗಡಿ: ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನ ಮತ್ತು ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಅವರ ಜೀವನವನ್ನು ಅರ್ಥೈಸಿದಾಗ ಅವರಲ್ಲಿದ್ದ ಸರಳತೆ, ಶಿಸ್ತು, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ದೇಶದ ಮೇಲಿನ ಅಪಾರ ಪ್ರೀತಿ ನಮಗೆ ಆದರ್ಶಪ್ರಾಯವಾಗಿದೆ ಎಂದು ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ.ಮಂಡಗಳಲೆ ಹೇಳಿದರು.

ಗುರವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ಸೆ.2 ರಂದು ಹಮ್ಮಿಕೊಂಡ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ದಿನಾಚರಣೆ ನಡೆಸಿ ಬಳಿಕ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸಿನ ಹಿಂದೆ ಸಾಗುವಾಗ ಜೀವನದ ಮೂಲ ಮೌಲ್ಯಗಳನ್ನು ಮರೆಯಬಾರದು. ಸರಳವಾಗಿ ಬದುಕುವುದು, ಪ್ರಾಮಾಣಿಕವಾಗಿ ನಡೆದುಕೊಳ್ಳುವುದು, ಸಮಯವನ್ನು ಗೌರವಿಸುವುದು, ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವುದು ಮತ್ತು ಸಮಾಜದ ಬಗ್ಗೆ ಕಾಳಜಿ ಹೊಂದುವುದು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಜೀವನದಿಂದ ಕಲಿಯಬೇಕಾದ ಪ್ರಮುಖ ಪಾಠಗಳಾಗಿವೆ ಎಂದು ಅವರು ತಿಳಿಸಿದರು.

ಮಹಾತ್ಮ ಗಾಂಧೀಜಿ ಅವರು ಸತ್ಯ ಮತ್ತು ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರೆ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರು ಸರಳತೆ ಮತ್ತು ಕರ್ತವ್ಯನಿಷ್ಠೆಯ ಮೂಲಕ ಸಾರ್ವಜನಿಕ ಜೀವನದಲ್ಲಿ ಆದರ್ಶ ಮಾದರಿಯಾದರು. ಇವರಿಬ್ಬರ ಜೀವನವೂ “ದೊಡ್ಡ ಸ್ಥಾನಕ್ಕಿಂತ ದೊಡ್ಡ ಮೌಲ್ಯಗಳು ಮುಖ್ಯ” ಎಂಬ ಸಂದೇಶವನ್ನು ಸಾರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀ ಪ್ರಜ್ವಲ್ ರೈ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರಾಗುವ ನಿಟ್ಟಿನಲ್ಲಿ ಪ್ರಾಮಾಣಿಕತೆ, ಶಿಸ್ತು, ಸ್ವಾವಲಂಬನೆ ಹಾಗೂ ದೇಶಪ್ರೇಮದಂತಹ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು. ಬಳಿಕ ವಿದ್ಯಾರ್ಥಿಗಳು “ರಘುಪತಿ ರಾಘವ ರಾಜಾರಾಮ್” ಭಜನೆಯನ್ನು ಭಕ್ತಿಭಾವದಿಂದ ಹಾಡಿ ಗಾಂಧೀಜಿಯವರನ್ನು ಸ್ಮರಿಸಿದರು. ವಿದ್ಯಾರ್ಥಿಗಳ ಭಜನೆ ಹಾಗೂ ಗಣ್ಯರ ಸಂದೇಶಗಳೊಂದಿಗೆ ಕಾರ್ಯಕ್ರಮವು ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಆದರ್ಶಗಳನ್ನು ಸ್ಮರಿಸುವುದರ ಜೊತೆಗೆ, ಅವುಗಳನ್ನು ವಿದ್ಯಾರ್ಥಿಗಳ ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪಕ್ಕೆ ಸಾಕ್ಷಿಯಾಯಿತು.

ಪ್ರಾಂಶುಪಾಲರಾದ ಬಾಲಕೃಷ್ಣ ನಾಯ್ಕ್, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!