32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ‘STEP UP 2026’ ಕಾರ್ಯಕ್ರಮಕ್ಕೆ ಚಾಲನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರೂಪಿಸಲಾದ ‘STEP UP 2026 – Step Towards Responsible Citizenship’ ಕಾರ್ಯಕ್ರಮಕ್ಕೆ ಅ. 3ರಂದು ಚಾಲನೆ ನೀಡಲಾಯಿತು.

ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರಿಕತ್ವದ ಗುಣಗಳನ್ನು ಬೆಳೆಸುವುದು, ಆತ್ಮವಿಶ್ವಾಸ, ನಾಯಕತ್ವ, ಸಾಮಾಜಿಕ ಕಾಳಜಿ ಹಾಗೂ ಜೀವನ ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅ. 3ರಿಂದ ಅ. 7ರವರೆಗೆ ವಿವಿಧ ಚಟುವಟಿಕೆಗಳು ಹಾಗೂ ತರಬೇತಿ ಕಾರ್ಯಕ್ರಮಗಳು ಶಾಲಾ ಆವರಣದಲ್ಲಿ ನಡೆಯಲಿವೆ.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕರಾದ ಎಸ್. ಎನ್. ಕಾಕತ್ಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನೊಂದಿಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವ ಅಗತ್ಯವನ್ನು ತಿಳಿಸಿ, ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಜವಾಬ್ದಾರಿ, ನಾಯಕತ್ವ ಗುಣ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

‘STEP UP 2026’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಸಾಮರ್ಥ್ಯಗಳನ್ನು ಅರಿತುಕೊಳ್ಳಲು ಹಾಗೂ ಭವಿಷ್ಯದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಪ್ರೇರಣೆ ನೀಡುವ ವೇದಿಕೆಯಾಗಲಿದೆ.

ಶಾಲೆಯ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಈ ಶಿಬಿರದ ಅಧ್ಯಕ್ಷತೆ ವಹಿಸಿರುವರು. ವಿದ್ಯಾರ್ಥಿಗಳಾದ ನಿನಾದ್ ಕಾರ್ಯಕ್ರಮ ನಿರೂಪಿಸಿ, ಆಕಾಶ್ ಸ್ವಾಗತಿಸಿ, ಅತುಲ್ಯ ತೇಜ ವಂದಿಸಿದರು.

Related posts

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!