32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ನಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ಕೊಕ್ಕಡ ವಲಯ ಹಾಗೂ ಉಜಿರೆ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಹಾಗೂ ಉಜಿರೆ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟವು ಸರ್ಕಾರಿ ಪ್ರೌಢಶಾಲೆ, ನಿಡ್ಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಣಿಯೂರು-ಕಕ್ಕಿಂಜೆಗಳಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು: ಮನ್ವಿತ್ ಎಸ್. – ಗುಂಡು ಎಸೆತ, ವರ್ಷ – ಗುಂಡು ಎಸೆತ, ಮನ್ವಿತ್ – ಹರ್ಡಲ್ಸ್, ಪ್ರಜ್ವಲ್ – 600 ಮೀಟರ್ ಓಟ, ರಂಜಿನಾ ಬಾನು – ಉದ್ದಜಿಗಿತ ಹಾಗೂ ತ್ರಿವಿಧ ಜಿಗಿತ, ಕೇತನ್ – ಗುಂಡು ಎಸೆತ,
ನಿಕೇಶ್ – ತ್ರಿವಿಧ ಜಿಗಿತ, ಲೋಹಿತ್ – ತ್ರಿವಿಧ ಜಿಗಿತ, ರಿಲೇ: ಸ್ವಸ್ತಿಕ್, ಮನೋಜ್ ಹಾಗೂ ಶ್ರವಣ್, ನಿತಿನ್
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಟಿ. ಅಭಿನಂದನೆ ಸಲ್ಲಿಸಿ, ಮುಂದಿನ ಹಂತದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಹೇಮುದರ್ ತರಬೇತಿ ನೀಡಿರುತ್ತಾರೆ.

Related posts

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya
error: Content is protected !!