ಅರಸಿನಮಕ್ಕಿ : ಮಹಾತ್ಮ ಗಾಂಧಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸುವುದರೊಂದಿಗೆ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭವನ್ನು ನಡೆಸಲಾಯಿತು. ವಿಬಿಜಿ ರಾಮ್ ಜಿ ಯೋಜನೆಯ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು, ಹಾಗೂ ಜಿಪಿಡಿಪಿ ಯೋಜನೆಯ ಗ್ರಾಮ ಸಭೆಯನ್ನು ಪಂಚಾಯತ್ ಆಡಳಿತಾಧಿಕಾರಿ ಭರತ್ ಎಲ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ರವರು ಸ್ವಚ್ಛತೆ , ಆರೋಗ್ಯ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸೇರಿದ ಎಲ್ಲಾ ವರ್ತಕರೊಂದಿಗೆ ಚರ್ಚಿಸಿ ಈಗಾಗಲೇ ಪ್ರತಿ ಅಂಗಡಿಗಳಿಂದ ಒಣ ಕಸ ಸಂಗ್ರಹಿಸುತ್ತಿದ್ದು ಸದ್ರಿ ಒಣ ಕಸ ಸಂಗ್ರಹಕ್ಕೆ ಶುಲ್ಕ ವಿಧಿಸುವುದೆಂದು ನಿರ್ಣಹಿಸಲಾಯಿತು. ಗ್ರಾಮಸ್ಥ ಬಂಧುಗಳಿಗೆ ವಿಬಿಜಿ ರಾಮ್ ಜಿ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು.
ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಯಿತು. ನಮ್ಮ ಗ್ರಾಮ ನಮ್ಮ ಯೋಜನೆಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಎಂ ಬಿ ಕೆ, ಎಲ್ ಸಿ ಆರ್ ಪಿ ಹಾಗೂ ಇತರ ಸಖಿಗಳು, ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲೀಕರು ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದರು.













