31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಆರ್ ಫಾರ್ಮ್ ಅರ್ಜಿಗಳ ಸಲ್ಲಿಕೆಯಲ್ಲಿ ಅಕ್ರಮದ ಆರೋಪ; ಸಮಗ್ರ ತನಿಖೆಗೆ ಎಸ್.ಡಿ.ಪಿ.ಐ ಆಗ್ರಹ

ಬೆಳ್ತಂಗಡಿ: ಎಸ್.ಐ.ಆರ್ ಪ್ರಕ್ರಿಯೆಯಡಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಪಟ್ಟಣ ಪಂಚಾಯತ್, ಉಜಿರೆ, ಕಾಶಿಪಟ್ನ ಪೆರಾಡಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಸಲ್ಲಿಕೆಯಾಗಿರುವ Form-7 ಅರ್ಜಿಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ತಹಶೀಲ್ದಾರ್‌ಗೆ ದೂರು ಸಲ್ಲಿಸಲಾಯಿತು.

Form-7 ಅರ್ಜಿಗಳ ಸಲ್ಲಿಕೆ ಹಾಗೂ ಪರಿಶೀಲನಾ ಪ್ರಕ್ರಿಯೆಯಲ್ಲಿ ಯಾವುದೇ ನಿಯಮಬಾಹಿರತೆ ನಡೆದಿದೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಬೇಕು. ಅರ್ಜಿದಾರರ ವಿವರಗಳು, ಮತದಾರರ ಅನುಮತಿ ಹಾಗೂ ಅರ್ಜಿಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು SDPI ದೂರಿನಲ್ಲಿ ಒತ್ತಾಯಿಸಿದೆ.

ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಆತುರದಲ್ಲಿ ಮತದಾರರ ಪಟ್ಟಿಯಿಂದ ತೆಗೆದುಹಾಕಬಾರದು. Form-7 ಅರ್ಜಿಗಳ ಕುರಿತು ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಲಾಗಿದೆ.

ಸುಳ್ಳು ಮಾಹಿತಿ ಅಥವಾ ಅಕ್ರಮ ವಿಧಾನಗಳ ಮೂಲಕ ಅರ್ಜಿಗಳನ್ನು ಸಲ್ಲಿಸಿರುವುದು ತನಿಖೆಯಲ್ಲಿ ದೃಢಪಟ್ಟಲ್ಲಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು ಎಂದು SDPI ಒತ್ತಾಯಿಸಿದೆ.

Form-7 ಮೂಲಕ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಪ್ರಕ್ರಿಯೆ ಚುನಾವಣಾ ಆಯೋಗದ ನಿಗದಿತ ನಿಯಮಗಳಂತೆ ನಡೆಯಬೇಕಾಗಿದ್ದು, ಅರ್ಜಿಗಳ ಸತ್ಯಾಸತ್ಯತೆ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸುವುದು ಚುನಾವಣಾ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು SDPI ತಿಳಿಸಿದೆ.

ಈ ಸಂದರ್ಭದಲ್ಲಿ SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಸಮಿತಿ ಸದಸ್ಯ ಅಶ್ರಫ್ ಕಟ್ಟೆ ಹಾಗೂ ಲಾಯಿಲ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ ಉಪಸ್ಥಿತರಿದ್ದರು.

Related posts

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya
error: Content is protected !!