31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಐಆರ್ ಫಾರಂ ನಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪ: . ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಎಸ್‌ಐಆರ್ ಫಾರಂ–7 ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಸಮುದಾಯಗಳ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸಿರುವ ಆರೋಪದ ಕುರಿತು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅ.3. ಬೆಳ್ತಂಗಡಿ ತಹಸೀಲ್ದಾರ್ ಎಸ್. ಎನ್ ನರಗುಂದ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಅಲ್ಪಸಂಖ್ಯಾತರ ಗ್ರಾಮೀಣ ಅಧ್ಯಕ್ಷ ಸೆಬಾಸ್ಟಿಯನ್ ಕಳೆಂಜ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್ ಉಜಿರೆ, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ಎಸ್.ಎಸ್ಟಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಪ್ರಮುಖರಾದ ಲಕ್ಷ್ಮಣ, ಶ್ರೀನಿವಾಸ ಉಜಿರೆ, ಜಯಾನಂದ ಪಿಲಿಕಳ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ ಇನ್ನಿತರರು ಉಪಸ್ಥಿತರಿದ್ದರು.

Related posts

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
error: Content is protected !!