ಉಜಿರೆ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ‘ಗುರು ಚಿಂತನೆ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಕವನ ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, (ರಾಜ್ಯ ಪಠ್ಯಕ್ರಮ) ಉಜಿರೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ಸುರ್ಯ ಅವರು ದ್ವಿತೀಯ ಬಹುಮಾನ ಪಡೆದು ಶಾಲೆಗೆ ಹೆಮ್ಮೆ ತಂದಿದ್ದಾರೆ.
ಸ್ಪರ್ಧೆಯಲ್ಲಿ ತಮ್ಮ ಕವನ ರಚನೆ ಹಾಗೂ ಪ್ರಸ್ತುತಪಡಿಸುವಿಕೆಯ ಮೂಲಕ ಗಮನ ಸೆಳೆದ ಅದ್ವಿತಿ ರಾವ್ ಸುರ್ಯ ಅವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದರು.













