32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯಲ್ಲಿ ಪ್ರಜಾಸೇವಾ ಆಂದೋಲನ ಸಭೆ

ಬೆಳ್ತಂಗಡಿ : ರಾಜ್ಯ ಸರಕಾರದ ಬಾಗಿಲಿಗೆ ಬಂತು ಸರರ್ಕಾರ ಸೇವೆಗೆ ಇರಲಿ ಸಹಕಾರ ಪಟ್ರಮೆ ಗ್ರಾಮ ಪಂಚಾಯತ್ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಗ್ರಾ. ಪಂ. ಸಭಾಭವನದಲ್ಲಿ ಅ. 3 ರಂದು. ನಡೆಯಿತು.

ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಲೂಕಿನ ಮೂರು ಹೋಬಳಿ ಕೇಂದ್ರಗಳಲ್ಲಿ ಹಾಗೂ ಒಂದು ಗ್ರಾಮದಲ್ಲಿ ಸಭೆ ಈಗಾಗಲೇ ನಡೆದಿದ್ದು ಎರಡನೇ ಗ್ರಾಮಮಟ್ಟದ ಸಭೆ ಇಲ್ಲಿ ನಡೆಯುತ್ತಿದೆ. ಜನರ ಬಳಿಗೆ ಇಲಾಖೆಗಳು ಬಂದು ಜನರ ಸಮಸ್ಯೆ ಕಿವಿಯಾಗುವ ಈ ಯೋಜನೆಯಲ್ಲಿ ಸಾರ್ವಜನಿಕರು ಅಹವಾಲು ಸಲ್ಲಿಸಬಹುದು, ಜನರ ಬೇಡಿಕೆಗಳಿಗೆ ಸ್ಪಂದಿಸುವ ಕಾರ್ಯ ಈ ಮೂಲಕ ನಡೆಯುತ್ತದೆ. ರಸ್ತೆಗಳ ದುರಸ್ತಿಗೆ ಈ ಸಭೆ ಆಶಾಕಿರಣವಾಗಲಿ, ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಮುಂಬರುವ ದಿನಗಳಲ್ಲಿ ನಡೆಯಲಿದ್ದು ಗಣತಿಗೆ ಬರುವ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಎಂದು ಹೇಳಿದರು.

ತಹಶೀಲ್ದಾರ್ ಎಸ್. ಎನ್. ನರಗುಂದ, ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಎನ್, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಾಮ್ಮ ಸ್ವಾಗತಿಸಿದರು.

Related posts

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!