24.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಆಯ್ಕೆ

ಬೆಳ್ತಂಗಡಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಂಸ್ಥೆಯ ವಾರ್ಷಿಕ ಆಡಳಿತ ಮಂಡಳಿ ಚುನಾವಣೆ ಬೆಂಗಳೂರಿನಲ್ಲಿ ಚುನಾವಣಾಧಿಕಾರಿ ಡಾ. ವಿಕಾಸ್ ಅವರ ನೇತೃತ್ವದಲ್ಲಿ ನಡೆಯಿತು.

ಖ್ಯಾತ ಮೂತ್ರರೋಗ ತಜ್ಞ ಹಾಗೂ ಶಸ್ತ್ರಚಿಕಿತ್ಸಕರಾದ, ವೆನ್‌ಲಾಕ್ ಆಸ್ಪತ್ರೆಯ ಮೂತ್ರರೋಗ ವಿಭಾಗದ ಮುಖ್ಯಸ್ಥ ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಅವರು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದಲ್ಲಿ ಅ.23 ಮತ್ತು 24ರಂದು ನಡೆಯಲಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಡಾ. ಪೂಜಾರಿ ಅವರು ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರು ಪ್ರಸ್ತುತ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವೈದ್ಯಕೀಯ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಡಾ. ಪೂಜಾರಿ ಅವರು ರಾಜ್ಯಮಟ್ಟದ ಡಾ. ಬಿ.ಸಿ. ರಾಯ್ ಪ್ರಶಸ್ತಿ ಸೇರಿದಂತೆ ವಿವಿಧ ಗೌರವಗಳಿಗೆ ಪಾತ್ರರಾಗಿದ್ದಾರೆ. ದೃಶ್ಯಮಾಧ್ಯಮ ಕ್ಷೇತ್ರದ ಸುವರ್ಣಕನ್ನಡ ನ್ಯೂಸ್ ವಾಹಿನಿಯ ಹೆಲ್ತ್‌ಕೇರ್ ಪ್ರಶಸ್ತಿ ಕೂಡ ಅವರಿಗೆ ಲಭಿಸಿದೆ.

Related posts

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya
error: Content is protected !!