32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25ನೇ ವರ್ಷದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅ.3 ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ, ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರಿಗೆ ನೆರವಾಗುವ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು. ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ, ಸಾಮಾಜಿಕ ಸೇವೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರಿಂದ ಸಮಾಜದ ನಾನಾ ವರ್ಗದ ಜನರಿಗೆ ಅನುಕೂಲವಾಗುತ್ತಿದೆ. ರಕ್ತದಾನವು ಸಮಾಜದಲ್ಲಿ ಶ್ರೇಷ್ಠವಾದ ದಾನಗಳಲ್ಲಿ ಒಂದಾಗಿದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಅಗತ್ಯವಿರುವವರಿಗೆ ರಕ್ತದಾನಿಗಳ ನೆರವು ಜೀವ ಉಳಿಸುವ ಕಾರ್ಯವಾಗುತ್ತದೆ. ಯುವಜನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ರಕ್ತದಾನಕ್ಕೆ ಮುಂದಾಗಬೇಕು. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ಮಾನವೀಯತೆಯ ಮನೋಭಾವವನ್ನು ಬೆಳೆಸುತ್ತವೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ ಕೆ. ಮಾತನಾಡಿ, ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗೆ ಸೀಮಿತವಾಗದೆ ಸದಸ್ಯರು ಹಾಗೂ ಸ್ಥಳೀಯ ಜನರ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಸಂಘದ ವತಿಯಿಂದ ಊರಿನ ಜನರಿಗೆ ಅನುಕೂಲವಾಗುವಂತಹ ಇನ್ನಷ್ಟು ಹೊಸ ಯೋಜನೆಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು.


ಸಂಘದ ವತಿಯಿಂದ ನಡೆಯುವ ಸಾಮಾಜಿಕ ಹಾಗೂ ಜನಪರ ಕಾರ್ಯಕ್ರಮಗಳಿಗೆ ಸದಸ್ಯರು ಮತ್ತು ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಹಕಾರ ಕ್ಷೇತ್ರದ ಮೂಲಕ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಸೇವೆಗಳನ್ನು ತಲುಪಿಸುವ ಜತೆಗೆ ಸಮಾಜಮುಖಿ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.


ಧರ್ಮಸ್ಥಳ ಪ್ಯಾಕ್ಸ್ ಅಧ್ಯಕ್ಷ ಪ್ರೀತಮ್, ಉಜಿರೆ ಮಹಾಶಕ್ತಿ ಕೇಂದ್ರದ ಯಶವಂತ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಹರೀಶ್, ಜಿಲ್ಲಾ ಪ್ರಮುಖರಾದ ಸೀತಾರಾಮ ಬೆಳಾಲು, ಪ್ರಶಾಂತ ಪಾರೆಂಕಿ,ಕೊರಗಪ್ಪ ಗೌಡ, ಹರೀಶ್ ಕಳೆಂಜ, ಓಬಯ್ಯ ಗೌಡ, ಗಣೇಶ್ ಕೋಟ್ಯಾನ್,ಪಂಚಾಯಿತಿ ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ಗಣೇಶ್ ಬಂಗೇರ, ಸಂಘದ ನಿರ್ದೇಶಕರಾದ ವೆಂಕಟೇಶ್ವರ ಭಟ್, ರಾಘವ ಕಲ್ಮಂಜ, ಶಿವಪ್ರಸಾದ್, ರವಿ ಪೂಜಾರಿ, ಚೆನ್ನಕೇಶವ, ಅಜಯ್ ಕೆ.ಎ., ಅಶ್ವಿನಿ ಎ. ಹೆಬ್ಬಾರ್, ಸುಮಾ ಗೋಖಲೆ, ನಾರಾಯಣ ಫಡಕೆ, ಬಾಬು ಗೌಡ, ಸಿಇಒ ಪ್ರಸನ್ನ ಪರಾಂಜಪೆ, ಮ್ಯಾನೇಜರ್ ಡೇವಿಸ್ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ತಂಗಡಿಯ ಸಹಕಾರ ಭಾರತಿ, ಕನ್ಯಾಡಿಯ ಸೇವಾ ಭಾರತಿ, ಬೆಳ್ತಂಗಡಿ ರೋಟರಿ ಕ್ಲಬ್, ಸಂಘದ ವ್ಯಾಪ್ತಿಯ ರೋಟರಿ ಸಮುದಾಯದಳಗಳು, ಮಂಗಳೂರಿನ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಹಾಗೂ ಮುಂಡಾಜೆ ರೈತ ಸೇವಾ ಕೂಟ ಕಾರ್ಯಕ್ರಮದ ಸಹಭಾಗಿತ್ವ ವಹಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya
error: Content is protected !!