32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ.

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿ ಅ. 2ರಂದು ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳಾದ ನಿತಿನ್ ಗೌಡ ಹಾಗೂ ತ್ರಿಷಾ ಎಸ್.ಎಂ. ಅವರು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ, ಆದರ್ಶಗಳು ಹಾಗೂ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ಮಾತನಾಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ಶಿಸ್ತು ಮತ್ತು ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಶಿಕ್ಷಣವನ್ನು ಕೇವಲ ಅಂಕಗಳಿಗಾಗಿ ಬಳಸದೆ, ಅದರ ಮೂಲಕ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದ ಸೇವೆಗೆ ಮುಂದಾಗಬೇಕು ಎಂದು ಕರೆ ನೀಡಿದರು. ಸರಳ ಜೀವನ ನಡೆಸಿ, ಉತ್ತಮ ಚಿಂತನೆಗಳನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಪ್ರೇರಣೆ ನೀಡಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅರಾಧ್ಯ ನಿರೂಪಿಸಿ, ಈಥನ್ ಜಾನ್ಸನ್ ಸ್ವಾಗತಿಸಿ, ಮೊಹಮ್ಮದ್ ಅನೀನ್ ವಂದನಾರ್ಪಣೆ ಸಲ್ಲಿಸಿದರು.

Related posts

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಮದ್ದಡ್ಕ: 15 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya
error: Content is protected !!