31.4 C
ಪುತ್ತೂರು, ಬೆಳ್ತಂಗಡಿ
October 4, 2026
ಪ್ರಮುಖ ಸುದ್ದಿ

MRPL ದ್ವಿತೀಯ ಹಂತದ ಕಾರ್ಮಿಕರಿಗೆ ಆರೋಗ್ಯ ವಿಮೆ – BMS ಹಾಗೂ ಇತರ ಕಾರ್ಮಿಕ ಸಂಘಟನೆಗಳ ಬೇಡಿಕೆಗೆ ಮಹತ್ವದ ಸ್ಪಂದನೆ

ಮಂಗಳೂರು; ಅ.04: MRPLನಲ್ಲಿ ಕಾರ್ಯನಿರ್ವಹಿಸುತ್ತಿರುವ ದ್ವಿತೀಯ ಹಂತದ (Secondary Workforce) ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸಬೇಕೆಂಬ ಭಾರತೀಯ ಮಜ್ದೂರು ಸಂಘ (BMS) ಹಾಗೂ ಇತರ ಕಾರ್ಮಿಕ ಸಂಘಟನೆಗಳ ಬಹುಕಾಲದ ಬೇಡಿಕೆ ಈಡೇರುವ ಹಂತಕ್ಕೆ ತಲುಪಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು BMS ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ತಿಳಿಸಿದ್ದಾರೆ.

ಈ ಕುರಿತು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, MRPL ಗುತ್ತಿಗೆ ಕಾರ್ಮಿಕರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸುವ ಬೇಡಿಕೆಯ ಕುರಿತು ಈಗಾಗಲೇ ONGC ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಮುಂದಿನ ಒಂದು ತಿಂಗಳೊಳಗೆ ಈ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

MRPL ಕಾರ್ಮಿಕರ ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯ ದೃಷ್ಟಿಯಿಂದ ಆರೋಗ್ಯ ವಿಮೆ ಅತ್ಯಂತ ಅಗತ್ಯವಾಗಿದ್ದು, ಈ ಬೇಡಿಕೆಯನ್ನು BMS ಹಾಗೂ ಇತರ ಕಾರ್ಮಿಕ ಸಂಘಟನೆಗಳು ಹಲವು ಸಂದರ್ಭಗಳಲ್ಲಿ ಆಡಳಿತದ ಮುಂದೆ ಪ್ರಸ್ತಾಪಿಸುತ್ತಾ ಬಂದಿವೆ. ಶಾಸಕರಾದ ಉಮಾನಾಥ ಕೊಟ್ಯಾನ್ ಅವರ ಸಮ್ಮುಖದಲ್ಲಿಯೂ ಈ ಬೇಡಿಕೆಯನ್ನು ಮಂಡಿಸಲಾಗಿತ್ತು.

ಇದು ಆಡಳಿತಾತ್ಮಕವಾಗಿ ಮಹತ್ವದ ನಿರ್ಧಾರವಾಗಿದ್ದು, ONGC ಬೋರ್ಡ್‌ನ ಅನುಮೋದನೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ONGC ಅಧ್ಯಕ್ಷ ಅರುಣ್ ಕುಮಾರ್ ಸಿಂಗ್ ಅವರೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಆರೋಗ್ಯ ವಿಮೆ ಕುರಿತು ಘೋಷಣೆ ಮಾಡುವ ಭರವಸೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

₹1.20 ಕೋಟಿ ಪರಿಹಾರ – ಕಾರ್ಮಿಕರ ಹೋರಾಟಕ್ಕೆ ಸ್ಪಂದನೆ

ಇತ್ತೀಚೆಗೆ MRPLನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕ ಮನೀಷ್ ಶರ್ಮಾ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಲಾಗಿದೆ. ಮೃತ ಕಾರ್ಮಿಕರ ಕುಟುಂಬಕ್ಕೆ ನೀಡಿದ್ದ ಭರವಸೆಯಂತೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪೆಟ್ರೋಲಿಯಂ ಸಚಿವಾಲಯದ ಮೂಲಕ MRPL ಆಡಳಿತಕ್ಕೆ ಸೂಕ್ತ ನಿರ್ದೇಶನ ನೀಡಲು ಶ್ರಮಿಸಿದ ಕೇಂದ್ರ ಪೆಟ್ರೋಲಿಯಂ ಸಚಿವರು, ಸಚಿವಾಲಯದ ಅಧಿಕಾರಿಗಳು ಹಾಗೂ MRPL ಆಡಳಿತಕ್ಕೆ BMS ಕೃತಜ್ಞತೆ ಸಲ್ಲಿಸುತ್ತದೆ.

ಕಾರ್ಮಿಕರ ನ್ಯಾಯಯುತ ಬೇಡಿಕೆಗಳಿಗಾಗಿ BMS ಹಾಗೂ ಇತರ ಕಾರ್ಮಿಕ ಸಂಘಟನೆಗಳು ನಡೆಸಿದ ನಿರಂತರ ಹೋರಾಟಕ್ಕೆ ದೊರೆತ ಈ ಸ್ಪಂದನೆಯನ್ನು BMS ಸ್ವಾಗತಿಸುತ್ತದೆ.

ಆರೋಗ್ಯ ವಿಮಾ ಸೌಲಭ್ಯವು ಕೇವಲ ಭರವಸೆಯಾಗಿ ಉಳಿಯದೆ, ನಿಗದಿತ ಅವಧಿಯಲ್ಲಿ ಅಧಿಕೃತವಾಗಿ ಜಾರಿಗೆ ಬರಬೇಕು ಎಂಬುದು BMSನ ಸ್ಪಷ್ಟ ನಿಲುವಾಗಿದೆ. MRPLನಲ್ಲಿ ಕಾರ್ಯನಿರ್ವಹಿಸುವ ದ್ವಿತೀಯ ಹಂತದ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಸಮರ್ಪಕ ಆರೋಗ್ಯ ಮತ್ತು ಸಾಮಾಜಿಕ ಭದ್ರತೆ ದೊರೆಯುವವರೆಗೆ BMS ಈ ವಿಚಾರವನ್ನು ಜವಾಬ್ದಾರಿಯುತವಾಗಿ ಮುಂದುವರಿಸಿಕೊಂಡು ಹೋಗಲಿದೆ ಎಂದು ಅನಿಲ್ ಕುಮಾರ್ ಯು ತಿಳಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya
error: Content is protected !!