25.6 C
ಪುತ್ತೂರು, ಬೆಳ್ತಂಗಡಿ
October 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಪೇರಡ್ಕ-ಡೆಂಜೋಳಿ ಶ್ರೀ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

ಗರ್ಡಾಡಿ: ಪೇರಡ್ಕ-ಡೆಂಜೋಳಿ ಶ್ರೀ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಏಳು ಗ್ರಾಮಗಳ ಭಕ್ತರ ಸಮಾಲೋಚನಾ ಸಭೆ ಗರ್ಡಾಡಿಯ ಗೌರಿಶಂಕರ ಸಭಾಂಗಣದಲ್ಲಿ ನಡೆಯಿತು.

ಗರ್ಡಾಡಿ, ಪಡಂಗಡಿ, ನಾಲ್ಕೂರು, ಬಳಂಜ, ಸೋಣಂದೂರು, ಕುಕ್ಕೇಡಿ ಹಾಗೂ ನಿಟ್ಟಡೆ ಗ್ರಾಮದ ಭಕ್ತರು ಸಭೆಯಲ್ಲಿ ಭಾಗವಹಿಸಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಸೋತ್ಸವವನ್ನು ಯಶಸ್ವಿಯಾಗಿ ನಡೆಸುವ ಕುರಿತು ವಿವಿಧ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಉದಯ ಮಂಜಿತ್ತಾಯ ಹಾಗೂ ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ, ಜೀರ್ಣೋದ್ಧಾರದ ಕಾಮಗಾರಿಗಳು, ಬ್ರಹ್ಮಕಳಸೋತ್ಸವದ ಸಿದ್ಧತೆ ಹಾಗೂ ಭಕ್ತರ ಸಹಕಾರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಹಿರಿಯರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದು, ದೇವಸ್ಥಾನದ ಪುನರುಜ್ಜೀವನ ಕಾರ್ಯಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಜಿ. ಜಯರಾಮ ಗೌಡ, ಹಂಕರ್ಜಾಲ್ ಶ್ರೀನಿವಾಸ ಶೆಟ್ಟಿ, ಶ್ರೀಧರ್ ಪೂಜಾರಿ ಪರಿಮುಗ, ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ನಂದಿಕೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಜೇಶ್ ಆಚಾರ್ಯ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ಪೇರಡ್ಕ-ಡೆಂಜೋಳಿ ಶ್ರೀ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಸೋತ್ಸವವನ್ನು ಶ್ರದ್ಧಾಭಕ್ತಿಯಿಂದ ಹಾಗೂ ವೈಭವದಿಂದ ನಡೆಸಲು ಸಭೆಯಲ್ಲಿ ಭಕ್ತರು ತಮ್ಮ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya
error: Content is protected !!