24.5 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿಯಲ್ಲಿ ಮುಂಡಾಜೆ ಪ.ಪೂ.ಕಾಲೇಜಿನ ಎನ್ಎಸ್ಎಸ್ ಶಿಬಿರ ಉದ್ಘಾಟನೆ

ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2026 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು, ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಚಾರ್ಮಾಡಿ ಇದರ ಸಭಾಂಗಣದಲ್ಲಿ ಅ.04 ರಂದು ಶುಭಾರಂಭಗೊಂಡಿತು.

ಪ್ರಗತಿಪರ ಕೃಷಿಕ ಕೆ. ಅನಂತ ರಾವ್, ಮಠದ ಮಜಲು ಇವರು ಶಿಬಿರವನ್ನು ಉದ್ಘಾಟಿಸಿ, ಮಾತನಾಡಿ ಶಿಕ್ಷಣದ ಜೊತೆಗೆ ಜೀವನ ಕೌಶಲ್ಯವನ್ನು ಕಲಿಯಲು ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ ಎಂದು ಅಭಿಪ್ರಾಯಪಟ್ಟರು. ಶತಾಬ್ದಿ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಸಂಚಾಲಕ ನಾರಾಯಣ ಫಡಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಚಾರ್ಮಾಡಿ ಇದರ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಚಾರ್ಮಾಡಿ , ಸಮಾಜ ಸೇವಕ ಯು. ಹಸನಬ್ಬ ಚಾರ್ಮಾಡಿ, ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇದರ ಆಡಳಿತ ಮೊಕ್ತೇಸರರಾದ ಯಶೋಧರ ವಳಸಿರಿ, ಕಾಲೇಜಿನ ಪ್ರಾಂಶುಪಾಲೆ ಗೀತಾ , ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷೆ ಪ್ರಿಯಾ ಹರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಹಾಗೂ ಶಿಬಿರಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ ಕೆ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya
error: Content is protected !!