30.9 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯ ಸ್ವರ್ಣೋದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಬೆಳ್ತಂಗಡಿ : ಹಿರಿಯ ಸ್ವರ್ಣೋದ್ಯಮಿ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಸರಾಫ ಮುಳಿಯ ಶ್ಯಾಮ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು ಎಂದು ತಿಳಿಸಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರು, ಬಂಧುಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Related posts

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya
error: Content is protected !!