30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ: ನಾಯಿ ಮೃತಪಟ್ಟಿದ್ದು, ಸಂಕೋಲೆಯಲ್ಲಿ ತಲೆ ಮಾತ್ರ ಪತ್ತೆ,ಗ್ರಾಮಸ್ಥರಲ್ಲಿ ಆತಂಕ

ಬಳಂಜ: ಮನೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ, ನಾಯಿಯನ್ನು ಎಳೆದುಕೊಂಡು ಹೋದ ಘಟನೆ ಬಳಂಜ ಗ್ರಾಮದಲ್ಲಿ ಕಳೆದ ರಾತ್ರಿ ಅ 4ರಂದು ನಡೆದಿದೆ.

ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಳಂಜ ನಿವಾಸಿ ಹೇರ ಮನೆಯ ಪಾಂಡಿರಾಜ್ ಜೈನ್ ಅವರ ಮನೆಯಲ್ಲಿ ಎಂದಿನಂತೆ ನಾಯಿ ಕಟ್ಟಿ ಹಾಕಲಾಗಿತ್ತು. ರಾತ್ರಿ ವೇಳೆ ಚಿರತೆ ಮನೆಯ ಆವರಣಕ್ಕೆ ಬಂದು ಸಂಕೋಲೆಯಲ್ಲಿ ಕಟ್ಟಿಹಾಕಿದ್ದ ನಾಯಿಯ ಮೇಲೆ ದಾಳಿ ನಡೆಸಿದೆ. ದಾಳಿಯ ಬಳಿಕ ನಾಯಿಯ ದೇಹದ ಬಹುಭಾಗವನ್ನು ಚಿರತೆ ಕೊಂಡೊಯ್ದಿದ್ದು, ಸಮೀಪದ ಗುಡ್ಡದಲ್ಲಿ ಸಂಕೋಲೆಯಲ್ಲಿ ಸಿಲುಕಿದ್ದ ನಾಯಿಯ ತಲೆ ಮಾತ್ರ ಪತ್ತೆಯಾಗಿದೆ.

ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಚಿರತೆ ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಈ ಕುರಿತು ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯವಿದ್ದಲ್ಲಿ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯುವ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ

Suddi Udaya

ಬಿ.ಸಿ.ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!