30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ವಿಶೇಷ ಗ್ರಾಮ ಸಭೆ ರದ್ದು

ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆ ಹಾಗೂ ರಾಜ್ಯ ಹಣಕಾಸು ಆಯೋಗದ ಅನುದಾನದಡಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮೂಲಕ ಅನುಷ್ಠಾನಗೊಂಡ ಕಾಮಗಾರಿಗಳ 2026-27ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಮತ್ತು ಪರಿಶೋಧನಾ ವಿಶೇಷ ಗ್ರಾಮಸಭೆಯನ್ನು ಅ.6 ರಂದು ನಿಗದಿಪಡಿಸಲಾಗಿತ್ತು.

ನಿಗದಿಯಂತೆ ಬೆಳಿಗ್ಗೆ 10.30ಕ್ಕೆ ಅಧಿಕಾರಿಗಳು ಬಂದಿದ್ದು, ಗ್ರಾಮಸ್ಥರೆಲ್ಲರೂ ಸಭಾಂಗಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಅಧಿಕಾರಿಗಳು ರಸ್ತೆ ವೀಕ್ಷಣೆಗೆ ಎಂದು ಹೋದವರು ಒಂದು ಗಂಟೆ ತಡವಾಗಿ ಆಗಮಿಸಿದರು. ಜನರಿಗೆ
ಯಾವುದೇ ರೀತಿಯ ಮಾಹಿತಿಯನ್ನು ನೀಡದೇ ಅಧಿಕಾರಿಗಳು ಹೋಗಿ ತಡವಾಗಿ ಬಂದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಗ್ರಾಮಸಭೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ, ಹೊರ ನಡೆದರು.
ಅಂತಿಮವಾಗಿ ಗ್ರಾಮಸಭೆಯನ್ನು ರದ್ದುಗೊಳಿಸಲಾಯಿತು. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಪಂಚಾಯತ್ ಮಾಜಿ ಅಧ್ಯಕ್ಷರು,ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!