32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ತಾರತಮ್ಯ: ಎಸ್.ಡಿ.ಪಿ.ಐ ನಿಯೋಗದಿಂದ ತಹಶೀಲ್ದಾರರಿಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿರುವ ಮೀಸಲಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ನಿಯೋಗವು ಬೆಳ್ತಂಗಡಿ ತಹಸೀಲ್ದಾರರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.

ಗ್ರಾಮ ಪಂಚಾಯತ್ ಚುನಾವಣೆಯ ಮೀಸಲಾತಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶದ ತತ್ವಗಳನ್ನು ಸಮರ್ಪಕವಾಗಿ ಪಾಲಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಬೇಕು. ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮುದಾಯಗಳಿಗೆ ನ್ಯಾಯಸಮ್ಮತ ಪ್ರಾತಿನಿಧ್ಯ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿತು.

ಮೀಸಲಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅನ್ಯಾಯ ಅಥವಾ ತಾರತಮ್ಯ ನಡೆದಿದ್ದರೆ ಅದನ್ನು ಪರಿಶೀಲಿಸಿ, ನಿಯಮಾನುಸಾರ ಸೂಕ್ತ ತಿದ್ದುಪಡಿ ಕ್ರಮ ಕೈಗೊಳ್ಳಬೇಕು ಹಾಗೂ ಅರ್ಹ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು SDPI ನಿಯೋಗ ತಹಸಿಲ್ದಾರರಿಗೆ ಮನವಿ ಮಾಡಿತು.

ಈ ಸಂದರ್ಭದಲ್ಲಿ SDPI ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಕುವೆಟ್ಟು ಬ್ಲಾಕ್ ಅಧ್ಯಕ್ಷ ಹಂಝರಾಲಿ, ಸುನ್ನತ್ ಕೆರೆ ಬ್ರಾಂಚ್ ಅಧ್ಯಕ್ಷ ಕಲಂದರ್ ಬಿ.ಎಚ್. ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸಮೀರ್ ಎಸ್.ಕೆ. ಉಪಸ್ಥಿತರಿದ್ದರು.

Related posts

ನಾರಾವಿ ಬಸದಿಯಲ್ಲಿ ಅನಂತನೋಂಪಿ ಆರಾಧನಾ ಪೂಜಾ ವಿಧಾನ ಮತ್ತು ಉದ್ಯಾಪನಾ ಪೂಜಾ ವಿಧಾನ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
error: Content is protected !!