32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆ. 8 – 14 : ಬಳಂಜ ಶಾಲೆಯಲ್ಲಿ ಗುರುದೇವ ಪ.ಪೂ. ಕಾಲೇಜಿನ ಎನ್.ಎಸ್.ಎಸ್. ಶಿಬಿರ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ 2026 – 27 ನೇ ಸಾಲಿನ ವಾರ್ಷಿಕ ಶಿಬಿರ ಆ.08 ರಿಂದ 14 ರ ತನಕ ಬಳಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಆ.8 ರಂದು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಜನಜಾಗೃತಿ ವೇದಿಕೆ ಉಡುಪಿ- ದಕ್ಷಿಣ ಕನ್ನಡ ಜಿಲ್ಲಾ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್ ಕಾಪಿನಡ್ಕ ಶಿಬಿರವನ್ನು ಉದ್ಘಾಟಿಸಲಿದ್ದು, ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷೆ ಪ್ರೀತಿತ ಧರ್ಮವಿಜೇತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಹೆಚ್. ಧರ್ಣಪ್ಪ ಪೂಜಾರಿ, ,ಮೈಲ್ ಸ್ಟೋನ್ ಹೋಲ್ಡಿಂಗ್ ಎಲ್.ಎಲ್.ಸಿ ದುಬೈ ಮತ್ತು ಯು.ಎ.ಇ ಇದರ ಸಂಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಅಶ್ವಥ್ ಹೆಗ್ಡೆ ಕುಳೆಂಜಿರೋಡಿ ಗುತ್ತು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿ.ಕೆ. , ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ (ಹಾಪ್ ಕಾಮ್ಸ್) ನಿರ್ದೇಶಕ ರತ್ನರಾಜ ಜೈನ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಬಿ ಅಮೀನ್, ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ನಾರಾವಿ ಜನಸೇವಾ ಟ್ರಸ್ಟ್ ಅಧ್ಯಕ್ಷ ಅಭಿಜಿತ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ್ ಆರ್, ಪ್ರೌಢಶಾಲಾ ಮುಖ್ಯ ಶಿಕ್ಷಿಕಿ ಸುಲೋಚನ, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶಪಾಲೆ ಡಾ. ಸವಿತಾ, ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲ ಸುಕೇಶ್ ಕುಮಾರ್ ಕೆ, ಉಪ ಪ್ರಾಂಶುಪಾಲ ಬಿ.ಎ. ಶಮೀವುಲ್ಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅ.9 ರಿಂದ 13 ರ ತನಕ ಪ್ರತಿದಿನ ಬೆಳಿಗ್ಗೆ 6.30 ರಿಂದ ಧ್ವಜಾರೋಹಣ,7.30 ರಿಂದ ಶ್ರಮದಾನ, ಮಧ್ಯಾಹ್ನ 2 ಗಂಟೆಯಿಂದ ಶೈಕ್ಷಣಿಕ ಹಾಗೂ ರಾತ್ರಿ 7 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ರಂಗಕಲೆ ಮತ್ತು ಬದುಕು, ನಾನು ಮತ್ತು ಎನ್.ಎಸ್.ಎಸ್, ನಿರೂಪಣಾ ಕೌಶಲ್ಯ, ರೂಪಕಗಳು ಮತ್ತು ಬೀದಿ ನಾಟಕ, ನನ್ನೊಳಗಿನ ನಾನು ಈ ಮುಂತಾದ ವಿಷಯಗಳಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಲಿದೆ.

ಆ.14 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಪ್ರಗತಿಪರ ಕೃಷಿಕ ಸಂತೋಷ್ ಪಿ ಕಾಪಿನಡ್ಕ ಸಮಾರೋಪ ಭಾಷಣ ಮಾಡಲಿದ್ದು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್, ಕಿರುತೆರೆ ನಿರ್ದೇಶಕ ವಿನು ಬಳಂಜ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಪ್ರಮೋದ್ ಕುಮಾರ್ ಕೆಮಣಬೈಲು, ವಕೀಲ ಸತೀಶ್ ರೈ ಬಾರ್ದಡ್ಕ, ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಟ್ರಸ್ಟಿ ಪ್ರವೀಣ್ ಕುಮಾರ್ ಹೆಚ್.ಎಸ್., ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಕುರೆಲ್ಯ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಸುಶೀಲ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
error: Content is protected !!