30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪನೆಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ತೋಟಗಾರಿಕಾ ಬೆಳೆಗಳ ಪ್ರದೇಶವಾಗಿರುವ ಬೆಳ್ತಂಗಡಿ ತಾಲ್ಲೂಕಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನಲ್ಲಿ ಅಡಿಕೆ, ತೆಂಗು, ರಬ್ಬರ್, ಕಾಳುಮೆಣಸು, ಕೋಕೋ ಸೇರಿದಂತೆ ಹಲವು ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಈ ಭಾಗದಲ್ಲಿ ತೋಟಗಾರಿಕಾ ಶಿಕ್ಷಣ, ಸಂಶೋಧನೆ ಹಾಗೂ ರೈತರಿಗೆ ವೈಜ್ಞಾನಿಕ ಮಾರ್ಗದರ್ಶನ ನೀಡುವ ಸಂಸ್ಥೆಯ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಮಹಾವಿದ್ಯಾಲಯ ಸ್ಥಾಪನೆಗೆ ಸುಮಾರು 100 ಎಕರೆ ಜಮೀನು ಲಭ್ಯವಿರುವ ಸಾಧ್ಯತೆ ಇದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವಂತೆ ಶಾಸಕರು ಮನವಿ ಮಾಡಿದ್ದಾರೆ. ಈ ಜಾಗವನ್ನು ಬೋಧನಾ ತೋಟ, ಸಂಶೋಧನೆ ಹಾಗೂ ರೈತರ ತರಬೇತಿಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಮಹಾವಿದ್ಯಾಲಯವನ್ನು ಸರ್ಕಾರಿ ಅಥವಾ ಸಾರ್ವಜನಿಕ–ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಬಹುದು. ಇದರಿಂದ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನೂ ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಈ ಸಂಸ್ಥೆ ಸ್ಥಾಪನೆಯಾದರೆ ಸ್ಥಳೀಯ ತೋಟಗಾರಿಕಾ ಬೆಳೆಗಳ ಕುರಿತು ಸಂಶೋಧನೆ ನಡೆಸಲು ಹಾಗೂ ರೈತರಿಗೆ ಅಗತ್ಯವಾದ ತಾಂತ್ರಿಕ ಸಲಹೆ ನೀಡಲು ಅನುಕೂಲವಾಗಲಿದೆ. ಜೊತೆಗೆ ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಶಿಕ್ಷಣ ಪಡೆಯಲು ಉತ್ತಮ ಅವಕಾಶ ದೊರೆಯಲಿದೆ.

ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚಿಸಿ, ಸ್ಥಳ ಪರಿಶೀಲನೆ ನಡೆಸಿ, ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪನೆಯ ಸಾಧ್ಯತಾ ವರದಿ ಸಿದ್ಧಪಡಿಸಿ, ಮುಂದಿನ ಕ್ರಮ ಕೈಗೊಳ್ಳುವಂತೆ ಶಾಸಕ ಹರೀಶ್ ಪೂಂಜ ಅವರು ಸರ್ಕಾರವನ್ನು ಕೋರಿಕೊಂಡಿದ್ದಾರೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya
error: Content is protected !!