32.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎಸ್‌.ಡಿ.ಎಂ ಕಾಲೇಜಿನ ಕ್ರೀಡಾಪಟುಗಳ ಅಮೋಘ ಸಾಧನೆ

ಉಜಿರೆ : ಇತ್ತೀಚೆಗೆ ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗುಂಪು ಹಾಗೂ ವೈಯಕ್ತಿಕ ಕ್ರೀಡಾ ವಿಭಾಗಗಳಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಗುಂಪು ಕ್ರೀಡಾ ವಿಭಾಗದಲ್ಲಿ ಎಸ್‌.ಡಿ.ಎಂ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು, ಪುರುಷರ ವಾಲಿಬಾಲ್, ಮಹಿಳೆಯರ ವಾಲಿಬಾಲ್ ಹಾಗೂ ಮಹಿಳೆಯರ ನೆಟ್‌ಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿವೆ. ಪುರುಷರ ನೆಟ್‌ಬಾಲ್ ಹಾಗೂ ಮಹಿಳೆಯರ ಹ್ಯಾಂಡ್‌ಬಾಲ್ ತಂಡಗಳು ದ್ವಿತೀಯ ಸ್ಥಾನ ಗಳಿಸುವ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಮೆರೆದಿವೆ.

ವೈಯಕ್ತಿಕ ಕ್ರೀಡಾ ವಿಭಾಗದಲ್ಲಿಯೂ ಎಸ್‌.ಡಿ.ಎಂ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಮಂಜು ಎಂ. ಅವರು 100 ಮೀಟರ್ ಓಟದಲ್ಲಿ ಚಿನ್ನದ ಪದಕ, ನಿತಿನ್ ಯು.ಎಲ್. ಅವರು 5 ಕಿ.ಮೀ. ಓಟದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ದರ್ಶನ್ ಜೆ.ಆರ್. ಅವರು 10 ಕಿ.ಮೀ. ಓಟದಲ್ಲಿ ಕಂಚಿನ ಪದಕ ಗಳಿಸಿ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ ಮೂಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಶಾರದಾ , ಸುದೀನ್ ಪುಜಾರಿ ಮತ್ತು ಸಂದೇಶ್ ಪೂಂಜಾ ವಿದ್ಯಾರ್ಥಿಗಳ ತರಬೇತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಮೋಘ ಸಾಧನೆ ತೋರಿರುವ ಎಸ್‌.ಡಿ.ಎಂ ಕಾಲೇಜಿನ ಕ್ರೀಡಾಪಟುಗಳ ಪುರುಷರ ವಾಲಿಬಾಲ್, ಮಹಿಳೆಯರ ವಾಲಿಬಾಲ್ ಹಾಗೂ ಮಹಿಳೆಯರ ನೆಟ್‌ಬಾಲ್ ತಂಡಗಳು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿವೆ. ಅಕ್ಟೋಬರ್ 11ರಿಂದ 14ರವರೆಗೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎಸ್‌.ಡಿ.ಎಂ ಕಾಲೇಜಿನ ಈ ಕ್ರೀಡಾಪಟುಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಕ್ರೀಡಾಪಟುಗಳ ಈ ಗಮನಾರ್ಹ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ., ಎಸ್‌.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್., ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಶಾರದಾ, ಸುದೀನ್ ಪೂಜಾರಿ, ಸಂದೇಶ್ ಪೂಂಜಾ ಸೇರಿದಂತೆ ಇತರೆ ತರಬೇತುದಾರರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗಳಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರಿಯಲಿ ಎಂದು ಶುಭ ಹಾರೈಸಿದ್ದಾರೆ.

” ಕ್ರೀಡಾಪಟುಗಳ ಈ ಸಾಧನೆಯು ಕೇವಲ ವೈಯಕ್ತಿಕ ಯಶಸ್ಸಾಗಿರದೇ, ಕಾಲೇಜಿನ ಕ್ರೀಡಾ ಪರಂಪರೆ, ತರಬೇತಿ ವ್ಯವಸ್ಥೆ ಹಾಗೂ ಕ್ರೀಡೆಗೆ ನೀಡುತ್ತಿರುವ ನಿರಂತರ ಪ್ರೋತ್ಸಾಹದ ಪ್ರತಿಫಲವಾಗಿದೆ. ನಿರಂತರ ಅಭ್ಯಾಸ, ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಕ್ರೀಡಾ ಮನೋಭಾವದಿಂದ ಈ ಯಶಸ್ಸು ಸಾಧ್ಯವಾಗಿದೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಎಸ್‌.ಡಿ.ಎಂ ಕಾಲೇಜಿನ ಕ್ರೀಡಾಪಟುಗಳು ಇದೀಗ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದು, ಅಲ್ಲಿಯೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ ಎಂಬ ವಿಶ್ವಾಸವಿದೆ. ಅವರ ಸಾಧನೆಯು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದ್ದು, ಕಾಲೇಜಿನ ಕ್ರೀಡಾ ಕ್ಷೇತ್ರಕ್ಕೆ ಹೊಸ ಉತ್ಸಾಹವನ್ನು ತುಂಬಿದೆ”

  • ಡಾ. ಸತೀಶ್ಚಂದ್ರ ಎಸ್
    ಕಾರ್ಯದರ್ಶಿಗಳು,
    ಎಸ್.ಡಿ.ಎಂ ಶಿಕ್ಷಣ ಸಂಸ್ಥೆ

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya
error: Content is protected !!