30.9 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ‘ಕಂಡೊದ ಕಲೊಟ್ಟು ಬಿರ್ವರೆ ಗೊಬ್ಬು’

ಬೆಳ್ತಂಗಡಿ: ಪ್ರಕೃತಿ ಸೌಂದರ್ಯ ಹಾಗೂ ಸಾಂಸ್ಕೃತಿಕ ವೈವಿಧ್ಯತೆಗೆ ಹೆಸರುವಾಸಿಯಾದ ಲಾಯಿಲ ಗ್ರಾಮದಲ್ಲಿ ಕಳೆದ ಕೆಲವು ವರ್ಷಗಳಿಂದ ಸಮಾಜ ಬಾಂಧವರು ಒಂದೇ ಮನೆಯವರಂತೆ ಒಗ್ಗಟ್ಟಾಗಿ ಸೇರಿಕೊಂಡು ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಸಮಾಜದ ಎಲ್ಲರನ್ನು ಒಗ್ಗೂಡಿಸುವ ಇಂತಹ ಕಾರ್ಯಕ್ರಮಗಳ ಆಯೋಜನೆಯಲ್ಲಿ ಲಾಯಿಲ ಬಿಲ್ಲವ ಗ್ರಾಮ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿ ಅಧ್ಯಕ್ಷ ಸಂಪತ್ ಸುವರ್ಣ ಹೇಳಿದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವ ಬಿಲ್ಲವ ವೇದಿಕೆ, ಲಾಯಿಲ ಇವರ ವತಿಯಿಂದ ಪುದ್ದೊಟ್ಟು ದಿವಂಗತ ರಾಯಪ್ಪ ಪೂಜಾರಿಯವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ‘ಕಂಡೊದ ಕಲೊಟ್ಟು ಬಿರ್ವರೆ ಗೊಬ್ಬು’ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತುಳುನಾಡಿನ ಗ್ರಾಮೀಣ ಬದುಕು, ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಸಾಂಪ್ರದಾಯಿಕ ಕ್ರೀಡೆಗಳು ಇಂದಿನ ಆಧುನಿಕ ಜೀವನಶೈಲಿಯ ನಡುವೆ ಮರೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂತಹ ಕ್ರೀಡಾಕೂಟಗಳು ಕೇವಲ ಮನರಂಜನೆಗೆ ಸೀಮಿತವಾಗಿರುವುದಿಲ್ಲ. ಅವು ದೈಹಿಕ ಆರೋಗ್ಯ, ಮಾನಸಿಕ ಉಲ್ಲಾಸ ಹಾಗೂ ಸಾಮಾಜಿಕ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ವಿಶೇಷವಾಗಿ ಯುವಜನತೆ ನಮ್ಮ ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಗ್ರಾಮೀಣ ಜೀವನ ಪದ್ಧತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ಮಹತ್ವವನ್ನು ಅರಿತುಕೊಳ್ಳಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ. ಯುವ ಸಮುದಾಯವನ್ನು ನಮ್ಮ ಸಂಸ್ಕೃತಿಯೊಂದಿಗೆ ಬೆಸೆಯುವ ಇಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದು ಸಂಪತ್ ಸುವರ್ಣ ಹೇಳಿದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬೆಳ್ತಂಗಡಿ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅವರು ಮಾತನಾಡಿ, ಲಾಯಿಲ ಗ್ರಾಮ ಸಮಿತಿಯ ಕಾರ್ಯವನ್ನು ಶ್ಲಾಘಿಸಿ, ಇಂತಹ ಕಾರ್ಯಕ್ರಮಗಳು ಸಮಾಜದ ಒಗ್ಗಟ್ಟನ್ನು ಬಲಪಡಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಪರಿಚಯಿಸುವಲ್ಲಿ ಸಹಕಾರಿಯಾಗಿವೆ ಎಂದು ಹೇಳಿ ಶುಭ ಹಾರೈಸಿದರು.

ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹಭರಿತ ಪಾಲ್ಗೊಳ್ಳುವಿಕೆ

ಶೈಲೇಶ್ ಆರ್.ಜೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಪ್ರಮುಖರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು. ದಿನವಿಡೀ ನಡೆದ ವಿವಿಧ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡಾ ಸ್ಪರ್ಧೆಗಳಲ್ಲಿ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಅಭಿನಂದನ್ ಹರೀಶ್, ಮಾಲಾ ಎಂ.ಕೆ., ಚಂದ್ರಶೇಖರ್ ಇಂದಬೆಟ್ಟು, ಹಿತೇಶ್ ಕಾಪಿನಡ್ಕ, ಅರ್ಜನ್, ಅಶ್ವಥ್, ಸುದೀರ್ ಚಾರ್ಮಾಡಿ,ಭಾನು ಪ್ರಸನ್ನ ಬೆಳ್ತಂಗಡಿ, ಜಯ ಪೂಜಾರಿ ನಾರಾವಿ, ಭರತ್ ಗುರಿಪಳ್ಳ, ಸುರೇಂದ್ರ ಕೊಟ್ಯಾನ್, ಪ್ರಶಾಂತ್ ಬರಮೇಲು, ಚಂದ್ರಹಾಸ್ ಬಂಗೇರ, ದೀಪಕ್, ಮನೋಜ್ ಕುಂಜರ್ಪ, ಕಿಶೋರ್ ಪೆರ್ಲ, ಚಂದ್ರಶೇಖರ ಮೇಲಂತಬೆಟ್ಟು, ಸತೀಶ್ ಕುವೆಟ್ಟು, ಚಂದ್ರರಾಜ್ ನೂಜೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜೇತರಿಗೆ ಬಹುಮಾನ ವಿತರಣೆ

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಸಂತ ಸುವರ್ಣ, ಆನಂದ ಪೂಜಾರಿ ನಿನ್ನಿಕಲ್ಲು, ಗಿರಿಧರ ಪೂಜಾರಿ, ಕೃಷ್ಣಪ್ಪ ಪೂಜಾರಿ, ಪುರಂದರ ಪೂಜಾರಿ, ಲಕ್ಷ್ಮಣ ಪೂಜಾರಿ, ದಯಾನಂದ ಸಾಲಿಯಾನ್ ಹಿಮರಡ್ಕ ಹಾಗೂ ಹರೀಶ್ ಕುಮಾರ್ ಪುದೊಟ್ಟು ಉಪಸ್ಥಿತರಿದ್ದು, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.

ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಜಯಂತಿ ಅನ್ನಡ್ಕ ಹಾಗೂ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರವಿಚಂದ್ರ ನಾಡೆಂಜ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬೆಳಗ್ಗಿನ ಉದ್ಘಾಟನೆಯನ್ನು ಜಗದೀಶ್ ಪುದ್ದೊಟ್ಟು ನೆರವೇರಿಸಿದರು. ಕಾರ್ಯಕ್ರಮವನ್ನು ಜಯಾನಂದ ಲಾಯಿಲ ನಿರ್ವಹಿಸಿದರು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವ ಬಿಲ್ಲವ ವೇದಿಕೆಯ ವಿವಿಧ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಸಮಸ್ತ ಬೆಳ್ತಂಗಡಿ ಸಂಯುಕ್ತ ಜಮಾಅತ್ ಖಾಝಿಯಾಗಿ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್: ಕನ್ನಡಿಕಟ್ಟೆ ಮಸ್ಜಿದ್ ನಲ್ಲಿ ಕಾರ್ಯಕ್ರಮ ಸಂಪನ್ನ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಲ್ಲಿ ಸಂಭ್ರಮದ ‘ಆಟಿಡೊಂಜಿ ದಿನ’ ಆಚರಣೆ

Suddi Udaya
error: Content is protected !!