23.7 C
ಪುತ್ತೂರು, ಬೆಳ್ತಂಗಡಿ
October 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನುಗ್ರಹ ಪ.ಪೂ. ಕಾಲೇಜಿನ ಪ್ರಾಂಶುಪಾಲರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’ ಪ್ರಶಸ್ತಿ

ಉಜಿರೆ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ, ಅನುಗ್ರಹ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ಡಾ. ವಿಜಯ್ ಲೋಬೋ ಅವರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ಭಾನುವಾರ ನಡೆದ ಗುರು ನಮನ ಕಾರ್ಯಕ್ರಮದಲ್ಲಿ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ವಂ. ಫಾ. ಡಾ. ವಿಜಯ್ ಲೋಬೋ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಅವಿರತ ಸೇವೆ, ಶೈಕ್ಷಣಿಕ ಗುಣಮಟ್ಟದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾಡುತ್ತಿರುವ ನಿರಂತರ ಪ್ರಯತ್ನಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಆಸಕ್ತಿ, ಉತ್ತಮ ಮೌಲ್ಯಗಳು ಹಾಗೂ ಜವಾಬ್ದಾರಿಯುತ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ಅವರು ವಹಿಸುತ್ತಿರುವ ಪಾತ್ರವನ್ನು ಪ್ರಶಸ್ತಿ ಪತ್ರದಲ್ಲಿ ವಿಶೇಷವಾಗಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿ ಕೇಂದ್ರಿತ ಶಿಕ್ಷಣಕ್ಕೆ ಆದ್ಯತೆ ನೀಡಿ, ಗುಣಮಟ್ಟದ ಶಿಕ್ಷಣದೊಂದಿಗೆ ಶಿಸ್ತು, ಮೌಲ್ಯಗಳು ಮತ್ತು ಜೀವನ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ವಂ. ಫಾ. ಡಾ. ವಿಜಯ್ ಲೋಬೋ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಅವರಿಗೆ ಸಂದಿರುವ ಈ ಪ್ರತಿಷ್ಠಿತ ಗೌರವಕ್ಕೆ ಅನುಗ್ರಹ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಂ. ಫಾ. ಡಾ. ವಿಜಯ್ ಲೋಬೋ ಅವರಿಗೆ ದೊರೆತಿರುವ ‘ಎಕ್ಸೆಲ್ ವಿದ್ಯಾಭೂಷಣ–2026’ ಪ್ರಶಸ್ತಿಯು ಅನುಗ್ರಹ ಶಿಕ್ಷಣ ಸಂಸ್ಥೆಯ ಕೀರ್ತಿಗೆ ಮತ್ತೊಂದು ಗರಿಮೆ ಸೇರಿಸಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!